ಭಂಕೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ಜರುಗಿತು.
ಅತಿ ಹೆಚ್ಚು ಮತಗಳನ್ನು ಪಡೆದು ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷರು ಶ್ರೀ ಶರಣಬಸಪ್ಪ ದನ್ನಾ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಭಾಗಮ್ಮ ಅವರು ಗುಪ್ತ ಮತದಾನದಿಂದ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ ಎಂದು ಶಹಾಬಾದ್ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಲ್ಲಿನಾಥ ರಾವೂರ್ ಅವರು ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತಿ ಅಧ್ಯಕ್ಷರು ಮಾತನಾಡಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು ಬೆಂಬಲಿಗರು ಸ್ನೇಹಿತರು ನನ್ನನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ ಅದೇ ರೀತಿಯಾಗಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆದ ಮಾನ್ಯ ಪ್ರಿಯಾಂಕಾ ಖರ್ಗೆ ಅವರಿಗೆ ಧನ್ಯವಾದಗಳು ಹೇಳಿದರು.
ಸ್ಥಳೀಯ ಮಟ್ಟದಲ್ಲಿ ಕೂಡ ಕಾಂಗ್ರೆಸ್ ಪಕ್ಷ ಜಯಭೇರಿ ಸಾಧಿಸುತ್ತಿದೆ ಅದೇ ರೀತಿ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಅತಿ ಹೆಚ್ಚು ಕೆಲಸ ಕಾರ್ಯಗಳನ್ನು ನಾವು ಮಾಡಲು ಅನುಕೂಲವಾಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿವಾನಂದ್ ಪಾಟೀಲ್ ,ಸುನಿಲ್ ಮೆಂಗನ್
ಸಿರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಬೆಂಬಲಿಗರು ವಿಜಯೋತ್ಸವವನ್ನು ಆಚರಿಸಿ ಮೆರವಣಿಗೆ ಮೂಲಕ ಗ್ರಾಮ ದೇವತೆಯಾದ ಕೆರೆಮ್ಮ ದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದರ್ಶನವನ್ನು ಪಡೆದರು.