ಮಾಧ್ಯಮ ಸಂಭ್ರಮ –
ಮಾಧ್ಯಮ ಸಂಭ್ರಮ-೨೦೨೩ ಪ್ಲೇ-ಕಾರ್ಡ್ಸ್ ಬಿಡುಗಡೆ
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಇದೇ ಜುಲೈ ೧೩ – ೧೪ ರಂದು ಹಮ್ಮಿಕೊಳ್ಳುತ್ತಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬದ ಸ್ಪರ್ಧೆಗಳ ಪ್ಲೇ-ಕಾರ್ಡ್ಸ್ನ್ನು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಅವರು ಬಿಡುಗಡೆ ಮಾಡಿದರು.
ಜುಲೈ ತಿಂಗಳಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಮಾಧ್ಯಮ ಹಬ್ಬವನ್ನು ಹಮ್ಮಿಕೊಳ್ಳುತ್ತಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರವು ಪದವಿ ವಿದ್ಯಾರ್ಥಿಗಳಿಗಾಗಿ ನುಡಿಚಿತ್ರ ಬರವಣಿಗೆ, ವರದಿಗಾರಿಕೆ, ಪಿಟಿಸಿ, ಫೋಟೊಗ್ರಫಿ, ನ್ಯೂಸ್ ರಿಡಿಂಗ್ ಸೇರಿದಂತೆೆ ಎಂಟು ಸ್ಪರ್ಧೆಗಳನ್ನು ಆಯೋಜಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದ್ದು, ಕಾರ್ಯಕ್ರಮದ ಪ್ಲೇ-ಕಾರ್ಡ್ಸ್ನ್ನು ಬಿಡುಗಡೆಗೊಳಿಸಲಾಯಿತು.
ಪ್ಲೇ-ಕಾರ್ಡ್ಸ್ ಬಿಡುಗಡೆಗೊಳಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಅವರು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾಯೋಗಿಕ ಜ್ಞಾನ ಸಿಗಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚು ಅವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಮತ್ತು ಮಾಧ್ಯಮ ವಿದ್ಯಾರ್ಥಿಗಳು ಒಗ್ಗಟ್ಟಿನೊಂದಿಗೆ ಸಕ್ರೀಯವಾಗಿ ಭಾಗವಹಿಸಿದಾಗ ಕಾರ್ಯಕ್ರಮವು ಸಫಲಗೊಳ್ಳುತ್ತದೆ ಎಂದು ತಿಳಿಸಿದರು.
ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ.ಮುದ್ದೇಶ್, ಡಾ.ರವಿಕಿರಣ, ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ, ಜ್ಯೋತಿ ಸಿ, ಶ್ವೇತಾ ಎಂ.ಪಿ, ಅಕ್ಷತಾ ನಂದಿಕೇಶ್ವರಮಠ ಮತ್ತು ಮಾಧ್ಯಮ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.