ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದೆ.ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ, ತಜ್ಞ ವೈದ್ಯರ ತಂಡದಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಬಳಿ ಮನವಿ ಮಾಡಲಾಗುವುದು.ಈ ಸಂದರ್ಭದಲ್ಲಿ ಡಾ ಜಿ ಪರಮೇಶ್ವರ ಗೃಹ ಸಚಿವರು ಸಚಿವರಾದ ಸಂತೋಷ್ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಕೆಎಂಸಿಆರ್ಐ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ, ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಇದ್ದರು.