ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ ೬ರಂದು ಕಾರ್ಯಕ್ರಮ ಉದ್ಘಾಟಿಸಲು ಮಧುಗಿರಿ ಪಟ್ಟಣಕ್ಕೆ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಂದು ಪೂರ್ವ ಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿAದು ನಡೆದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೀರಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮವು ಐತಿಹಾಸಿಕವಾಗಿ ಹಾಗೂ ಜಿಲ್ಲಾ ಉತ್ಸವ ರೀತಿಯಲ್ಲಿ ನಡೆಯಬೇಕು.ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಏಒಈ ಸಿಬ್ಬಂದಿಯೊAದಿಗೆ ಕೆಲಸ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಪಟ್ಟಣದಲ್ಲಿ ಗುಂಡಿಗಳನ್ನು ಮುಚ್ಚಲು PWಆ ಇಂಜಿನಿಯರ್ ಗಳು ಕೂಡಲೇ ಒಂದು ಸಭೆಯನ್ನು ನಡೆಸಿ, ಖುದ್ದಾಗಿ ಅಧಿಕಾರಿಗಳೇ ಪಟ್ಟಣದ ಎಲ್ಲಾ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಹಾಗೂ ಗುಂಡಿ ಬಿದ್ದಿರುವ ಕಡೆ ಡಾಂಬರೀಕರಣ ಮಾಡುವಂತೆ ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರರಿಗೆ ಅವರು ಸೂಚಿಸಿದರು.
ಪಟ್ಟಣದಲ್ಲಿ ಸ್ವಚ್ಛತೆಯನ್ನು ಪೌರಕಾರ್ಮಿಕರಿಂದ ಮಾಡಿಸಬೇಕು ಹಾಗೂ ರಸ್ತೆ ಬದಿಗಳಲ್ಲಿರುವ ಗಿಡ ಗಂಟೆಗಳನ್ನು ತೆಗೆಸಿ ಸ್ವಚ್ಚ ಪಟ್ಟಣವನ್ನಾಗಿ ಮಾಡುವ ಜವಾಬ್ದಾರಿಯನ್ನು ಖುದ್ದಾಗಿ Pಆ ಅವರೇ ತೆಗೆದುಕೊಂಡು ಕೆಲಸವನ್ನು ಮಾಡಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳಿಂದ ಪಟ್ಟಣದಲ್ಲಿ ಯಾವುದೇ ರೀತಿಯ ಸಂಚಾರ ದಟ್ಟಣೆ ಯಾಗದ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
ಜಿಲ್ಲೆ ವಿವಿಧ ಭಾಗಗಳಿಂದ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮಜ್ಜಿಗೆಯನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಪ್ರತಿ ಗ್ರಾಮಗಳಿಂದ ಮತ್ತು ಹೋಬಳಿಗಳಿಂದ ಕರೆತರುವ ಜವಾಬ್ದಾರಿಯನ್ನು ವಿ ಎಸ್ ಎಸ್ ಎನ್ ಅವರು ವಹಿಸಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಶಿಸ್ತಿನಿಂದ ಕೂರುವಂತೆ ತಿಳಿಸಬೇಕು ಹಾಗೂ ಕಾರ್ಯಕ್ರಮ ಮುಗಿದ ನಂತರ ಸುರಕ್ಷಿತವಾಗಿ ವಾಪಸ್ ಕರೆದುಕೊಂಡು ಹೋಗುವಂತೆ ಕ್ರಮವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರು, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಐದು ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸ್ಟಾಲ್ ಗಳನ್ನು ಹಾಕಲಾಗುವುದೆಂದು ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಖಾಲಿ ಇರುವ ನಾಮಫಲಕಗಳಿಗೆ ಸರ್ಕಾರದ ಐದು ಯೋಜನೆಗಳ ಪೈಕಿ ಯಾವುದಾದರೂ ಒಂದು ಯೋಜನೆಯ ಬ್ಯಾನರ್ ಅಳವಡಿಸುವಂತೆ ತಹಶೀಲ್ದಾರ್ ಅವರಿಗೆ ತಿಳಿಸಿದರಲ್ಲದೆ, ಕಚೇರಿ ಮುಂಭಾಗದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಅವರು ಮಾತನಾಡಿ, ತಾಲೂಕಿನ ೧೧೦ ಹಳ್ಳಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರನ್ನು ನೀಡುವ ಯೋಜನೆಗೆ ಮುಖ್ಯಮಂತ್ರಿಗಳಿAದ ಶಂಕುಸ್ಥಾಪನೆ ಮಾಡಿಸಲಾಗುವುದು ಹಾಗೂ ತಾಲೂಕಿನ ವಿವಿಧ ಸ್ವಸಹಾಯ ಸಂಘಗಳಿಗೆ ಎನ್ ಎಲ್ ಆರ್ ಎಂ ಹಣವನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿAದ ಕೊಡಿಸಲಾಗುವುದು ಎಂದು ತಿಳಿಸಿದರು.
ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ
Leave a comment
Leave a comment