ತುಮಕೂರು: ಭಾರತವು ಒಟ್ಟು ೫೭,೦೦೦ಕ್ಕೂ ಹೆಚ್ಚು ಮಹಿಳಾ ಸಂಶೋಧಕರನ್ನು ಹೊಂದಿದೆ. ಇದು ದೇಶದ ಒಟ್ಟು ಸಂಶೋಧಕರ ಶೇ.೧೬.೬ರಷ್ಟಿದೆ. ಸಂಶೋಧನೆ, ವಿಜ್ಞಾನ-ತಂತ್ರಜ್ಞಾನದ ಮೇಲಿರುವ ಆಸಕ್ತಿ, ದೂರದೃಷ್ಟಿಯನ್ನು ಮಹಿಳೆಯರು ಸ್ವೀಕರಿಸಿರುವ ಮಹತ್ವವನ್ನು ಸಾರುತ್ತದೆ ಎಂದು ನವದೆಹಲಿಯ ಏಮ್ಸ್ನ ಡಾ. ಉಮಾ ಕುಮಾರ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ ಇದರ ಮಾತೃ ವೇದಿಕೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ೧೪ನೇ ರಾಷ್ಟಿçÃಯ ಮಹಿಳಾ ವಿಜ್ಞಾನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಆರೋಗ್ಯ, ವಿಜ್ಞಾನ, ಸಂಶೋಧನ ಕ್ಷೇತ್ರಗಳಲ್ಲಿ ಮುಂದಿದ್ದೇವೆ. ಮನೆಯಿಂದ ಹೊರಗೆ, ನಾಲ್ಕು ಗೋಡೆಗಳಾಚೆಗೆ ಸಾಧನೆಯ ಮೆಟ್ಟಿಲೇರಲು ಹೊರಟಿದ್ದೇವೆ, ಹೋರಾಡುತ್ತಿದ್ದೇವೆ. ಸಮಾಜದಲ್ಲಿ ಹೆಣ್ಣಿನ ಪಾತ್ರ ದೊಡ್ಡದು. ಆಧ್ಯಾತ್ಮಿಕ ಆರೋಗ್ಯದ ಅಗತ್ಯವಿದೆ. ಸಮಾಜದ ಮೂಲತತ್ವದ ಮೌಲ್ಯವು ಆರೋಗ್ಯದ ಮೇಲೆ ಯೋಗಕ್ಷೇಮವನ್ನು ಕೇಂದ್ರೀಕರಿಸುವುದಾಗಿದೆ. ವಿದ್ವತ್ಪೂರ್ಣ ಮಹಿಳೆಯರು ಸಮಾಜಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದರು.
ವಿಜ್ಞಾನ ಕ್ಷೇತ್ರದಲ್ಲಿರುವ ಮಹಿಳೆಯರು ತನ್ನ ಸುತ್ತಲಿರುವ ಸಮಾಜವನ್ನು ಪ್ರೇರೇಪಿಸುತ್ತಾರೆ. ವಿಜ್ಞಾನ ತಂತ್ರಜ್ಞಾನ ಕ್ಷೇತ್ರವನ್ನು ಉತ್ಕೃಷ್ಟವಾಗಿ ರೂಪಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಇದಕ್ಕೆ ಉದಾಹರಣೆ ಎಂಬAತೆ ವಿಜ್ಞಾನ ಜ್ಯೋತಿ ಅವರ ‘ಕಿರಣ್’ ಯೋಜನೆ. ೨೦೦೩ರಲ್ಲಿ ಆರಂಭವಾದ ವಿಜ್ಞಾನ ಭಾರತಿ ಅವರ ‘ಶಕ್ತಿ’ ಯೋಜನೆ ಸಮಾಜಕ್ಕಾಗಿ ಮಹಿಳೆಯರನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಿದೆ. ಯೋಗ ಮತ್ತು ಆಯುರ್ವೇದವು ಮಹಿಳೆಯರ ಯೋಗಕ್ಷೇಮಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.