ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೀರೆಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 2 ಲಕ್ಷ ಸಹಾಯಧನ
ತುಮಕೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೀರೆಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಯೋಜನೆ ವತಿಯಿಂದ ಎರಡು ಲಕ್ಷ ರೂಗಳ ಸಹಾಯಧನದ ಮಂಜೂರಾತಿ ಪತ್ರವನ್ನು ಮಾನ್ಯ ತಾಲ್ಲೋಕು ಯೋಜನಾಧಿಕಾರಿ ಸುನಿತಾ ಪ್ರಭು ರವರು ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು
ಈ ಸಂದರ್ಭದಲ್ಲಿ ಊರ್ಡಿಗೆರೆ ವಲಯದ ಮೇಲ್ವಿಚಾರಕರಾದ ಲೋಕೇಶ್,ಸಹಕಾರ ಸಂಘದ ಅಧ್ಯಕ್ಷರಾದ ದಯಾನಂದ್, ಉಪಾಧ್ಯಕ್ಷರಾದ ರುದ್ರೇಶ್, ಕಾರ್ಯದರ್ಶಿ ದಿನೇಶ್ ಹಾಗೂ ಹೀರೆಹಳ್ಳಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶೋಭಾ, ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.