ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 5ನೇ ಪುಣ್ಯಸ್ಮರಣೋತ್ಸವ ಹಿನ್ನೆಲೆಯಲ್ಲಿ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಾ.ಜಿ.ಪರಮೇಶ್ವರ ಅವರು ಶ್ರೀಗಳ ಗದ್ದುಗೆಗೆ ಹೋಗಿ ಆಶೀರ್ವಾದ ಪಡೆದರು ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
![ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 5ನೇ ಪುಣ್ಯಸ್ಮರಣೋತ್ಸವ 2 IMG 20240121 WA0086](https://targettruth.in/wp-content/uploads/2024/01/IMG-20240121-WA0086-1024x793.jpg)
ನಂತರ 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಅನೇಕ ಆದರ್ಶಗಳನ್ನು ನಮಗೆ ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಚಾಚು ತಪ್ಪದೆ ಪಾಲಿಸಿದವರು ಶ್ರೀ ಶಿವಕುಮಾರ ಸ್ವಾಮೀಜಿಗಳು.
ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಅವರ ಬದುಕಿಗೆ ದಾರಿ ತೋರಿದ ನಿಜ ದೈವ ಶಿವಕುಮಾರ ಸ್ವಾಮೀಜಿಗಳು. ಅವರ ಆಶ್ರಯದಲ್ಲಿ ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದ ಜವಾಬ್ಧಾರಿಗಳನ್ನು ನಿಭಾಯಿಸುತ್ತಿದ್ದಾರೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
![ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 5ನೇ ಪುಣ್ಯಸ್ಮರಣೋತ್ಸವ 3 IMG 20240121 WA0087](https://targettruth.in/wp-content/uploads/2024/01/IMG-20240121-WA0087-1024x682.jpg)
ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಜಿ.ಎಸ್.ಬಸವರಾಜ್, ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಕೆ.ಎನ್.ರಾಜಣ್ಣ, ಸುರೇಶ್ಗೌಡ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಉಪಸ್ಥಿತರಿದ್ದರು.
![ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 5ನೇ ಪುಣ್ಯಸ್ಮರಣೋತ್ಸವ 4 IMG 20240121 WA0088](https://targettruth.in/wp-content/uploads/2024/01/IMG-20240121-WA0088-1024x762.jpg)
![ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 5ನೇ ಪುಣ್ಯಸ್ಮರಣೋತ್ಸವ 5 IMG 20240121 WA0089](https://targettruth.in/wp-content/uploads/2024/01/IMG-20240121-WA0089-1024x682.jpg)