ಪೂರೈಕೆ ಸಕಾಲದಲ್ಲಿ ಆಗದಿದ್ದಲ್ಲಿ ಸ್ಥಳೀಯವಾಗಿಯೇ ಔಷಧಿ ಖರೀದಿಸಿ ರೋಗಿಗಳಿಗೆ ಪೂರೈಸಲು ಅವಕಾಶ ನೀಡಲಾಗಿದೆ. ಅನಾವಶ್ಯಕವಾಗಿ ರೋಗಿಗಳನ್ನು ಹೊರಗಡೆಯಿಂದ ಔಷಧಿ ಖರೀದಿಸುವಂತೆ ಸೂಚಿಸಬಾರದು ಮತ್ತು ಆಸ್ಪತ್ರೆಯ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರನ್ನು ಪೂರೈಸುವಂತೆ ಸೂಚಿಸಿದರು. ಸಿ ಸೆಕ್ಷನ್ ಹೆರಿಗೆ ಪ್ರಕರಣಗಳನ್ನು ಕಡಿಮೆ ಮಾಡಬೇಕು ಹಾಗೂ ಸಹಜ ಹೆರಿಗೆಗೆ ಪ್ರೋತ್ಸಾಹಿಸಬೇಕು. ಜಿಲ್ಲೆಯಲ್ಲಿ ಸಿ ಸೆಕ್ಷನ್ ಹೆರಿಗೆ ಪ್ರಕರಣ ಶೇ.೫೦ರಷ್ಟಿದ್ದು, ಇದು ಕಡಿಮೆಯಾಗಬೇಕು. ಇನ್ನು ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್ ಪ್ರಕರಣ ಕುರಿತಂತೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಕೀಲು ಮೂಳೆ ವಿಭಾಗದಲ್ಲಿ ಅನಸ್ತೇಷಿಯ ಕೊರತೆ ಇದ್ದು, ಎನ್.ಹೆಚ್.ಎಂ. ಅಡಿಯಲ್ಲಿ ಅನಸ್ತೇಷಿಯ ತಜ್ಞರನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಶಸ್ತç ಚಿಕಿತ್ಸಕಿ ಡಾ. ವೀಣಾ ಅವರಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಹೆಚ್.ಐ.ವಿ. ಪ್ರಕರಣಗಳು ಹೆಚ್ಚಾಗದಂತೆ ಲೈಂಗಿಕ ಕಾರ್ಯಕರ್ತೆಯರಿಗೆ ಆರೋಗ್ಯದ ಕುರಿತು ಅರಿವು ಮೂಡಿಸಬೇಕು. ಟ್ರಾಮಾ ಕೇರ್ ಸೆಂಟರ್ನ ಸಿಬ್ಬಂದಿ ನೇಮಕಾತಿ ಸಂಬAಧಿಸಿದAತೆ ಟೆಂಡರ್ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ, ಜಿಲ್ಲಾ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಒಬ್ಬರು ಇದ್ದು, ಮತ್ತೊಬ್ಬರನ್ನು ನೇಮಕ ಮಾಡುವ ಸಂಬAಧ ಪರಿಶೀಲಿಸುವುದಾಗಿ ತಿಳಿಸಿದರು. ಜಿಲ್ಲಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ನಲ್ಲಿ ಇಬ್ಬರು ತಂತ್ರಜ್ಞರು ಇದ್ದು, ಕನಿಷ್ಟ ಮೂರು ತಂತ್ರಜ್ಞರನ್ನು ನೇಮಕ ಮಾಡುವ ಸಂಬAಧ ಪರಿಶೀಲಿಸುವುದಾಗಿ ತಿಳಿಸಿದ ಅವರು, ಜಿಲ್ಲೆಯಲ್ಲಿ ಟಿಬಿ ಖಾಯಿಲೆಯಿಂದ ಮರಣ ಹೊಂದುವ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಇಳಿಯಬೇಕು ಎಂದು ಸೂಚಿಸಿದರು. ಬೀದಿ ನಾಯಿ ಕಡಿತ ಪ್ರಕರಣಗಳು ಹೆಚ್ಚಿರುವ ಕುರಿತು ವೈದ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದಾಗ, ಸಾಕಷ್ಟು ಔಷಧಿ ದಾಸ್ತಾನು ಹೊಂದಬೇಕು ಹಾಗೂ ಪಾಲಿಕೆ ವತಿಯಿಂದ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮಗಳನ್ನು ಆಯೋಜಿಸಿ ಚುಚ್ಚು ಮದ್ದು ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಮಾತನಾಡಿ, ಹೋಬಳಿ ಮಟ್ಟದಲ್ಲಿ ಸುಸಜ್ಜಿತವಾದ ಆಂಬುಲೆನ್ಸ್ ವಾಹನಗಳನ್ನು ಒದಗಿಸಿಕೊಡಬೇಕು. ವೈದ್ಯರು ಕೇಂದ್ರ ಸ್ಥಾನದಲ್ಲಿರಬೇಕಾದರೆ ಅವರಿಗೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸುಧಾರಿತ ವಸತಿ ಗೃಹ ವ್ಯವಸ್ಥೆಯಾಗಬೇಕು. ೪೦೦ ಹಾಸಿಗೆಗಳುಳ್ಳ ತುಮಕೂರು ಜಿಲ್ಲಾಸ್ಪತ್ರೆಗೆ ಪ್ರತಿ ದಿನ ಓಪಿಡಿ ವಿಭಾಗಕ್ಕೆ ೧೦೦೦ಕ್ಕೂ ಹೆಚ್ಚು ರೋಗಿಗಳು ಬರುವ ಕಾರಣ ಮತ್ತಷ್ಟು ಹಾಸಿಗೆಗಳನ್ನು ನೀಡುವ ವ್ಯವಸ್ಥೆಯಾಗಬೇಕು, ತುಮಕೂರು ಜಿಲ್ಲೆಯ ಕೈಗಾರಿಕಾ ಕಾರಿಡಾರ್ ಮತ್ತು ಹೆಚ್ಎಎಲ್ ಫ್ಯಾಕ್ಟರಿ ಘಟಕಗಳಲ್ಲಿ ಕೆಲಸ ಮಾಡಲು ಹೆಚ್ಚಿನ ಜನರು ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ವಾಸ್ತವ್ಯ ಮಾಡುವ ಕಾರಣ ಮುಂದಿನ ದೂರದೃಷ್ಟಿ ಇಟ್ಟುಕೊಂಡು ಸೂಕ್ತ ಆರೋಗ್ಯ ಯೋಜನೆಯನ್ನು ತಯಾರಿಸಿಕೊಂಡುವAತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್ ಗೌಡ, ಡಾ: ರಂಗನಾಥ್, ಆರೋಗ್ಯ ಇಲಾಖೆಯ ಆಯುಕ್ತರಾದ ರಣದೀಪ್, ಆರೋಗ್ಯ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿ ಅನಿಲ್ ಕುಮಾರ್, ಎನ್ಹೆಚ್ಎಂ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್, ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್, ಜಿಲ್ಲಾ ಶಸ್ತçಚಿಕಿತ್ಸಕಿ ಡಾ: ವೀಣಾ ಹಾಗೂ ಇತರೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.





