ತುಮಕೂರು(ಕ.ವಾ.)ಆ.೨: ಜಿಲ್ಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆಯಿಂದ ವಂಚಿತವಾಗಿರುವ ೫ವರ್ಷದೊಳಗಿನ ಮಕ್ಕಳಿಗೆ ಇನ್ನೊಂದು ವಾರದೊಳಗೆ ಲಸಿಕೆ ನೀಡಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿAದು ನಡೆದ ಇಂದ್ರಧನುಷ್ ಅಭಿಯಾನ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅಭಿಯಾನವನ್ನು ಮೂರು ಸುತ್ತುಗಳಲ್ಲಿ ಆಯೋಜಿಸಲಾಗಿದೆ. ಆಗಸ್ಟ್ ೭ ರಿಂದ ೧೨ರವರೆಗೆ ಮೊದಲ ಸುತ್ತು, ಎರಡನೇ ಸುತ್ತು ಸೆಪ್ಟೆಂಬರ್ ೧೧ ರಿಂದ ೧೬ರವರೆಗೆ ಹಾಗೂ ಮೂರನೇ ಸುತ್ತನ್ನು ಅಕ್ಟೋಬರ್ ೯ರಿಂದ ೧೪ರವರೆಗೆ ನಡೆಯುವ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದು ಹೇಳಿದರು.
ಜಿಲ್ಲೆಯ ಗರ್ಭಿಣಿ ಮಹಿಳೆಯರು ಮತ್ತು ೫ವರ್ಷಗಳ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರೊಂದಿಗೆ ಅಂಗನವಾಡಿ ಕಾರ್ಯಕರ್ತರು ಹಂಚಿಕೊಳ್ಳಬೇಕು. ಮಿಷನ್ ಇಂದ್ರಧನುಷ್ ೫.೦ ಅಭಿಯಾನದಲ್ಲಿ ಮನೆ ಮನೆ ಭೇಟಿ ಮಾಡಿ ಲಸಿಕೆ ಪಡೆಯಬೇಕಾಗಿರುವ/ಪಡೆಯದ/ಬಿಟ್ಟು ಹೋಗಿರುವವರ ಪಟ್ಟಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ೨ರಿಂದ ೫ವರ್ಷದೊಳಗಿನ ಮಕ್ಕಳು ದಡಾರ-ರುಬೆಲ್ಲಾ-೨, ಡಿಪಿಟಿ ಬೂಸ್ಟರ್, ಓಪಿವಿ ಬೂಸ್ಟರ್ ಲಸಿಕೆ ಪಡೆದಿದ್ದಾರೆಯೇ ಎಂದು ಪರಿಶೀಲಿಸಬೇಕು ಎಂದು ಹೇಳಿದರು.
ಗರ್ಭಿಣಿ ಮಹಿಳೆಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ತಾಯಂದಿರ ಸಭೆಗಳಲ್ಲಿ ಅಭಿಯಾನದ ದಿನಾಂಕಗಳ ಮಾಹಿತಿ ನೀಡಿ, ಲಸಿಕಾಕರಣದ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಇಂದ್ರಧನುಷ್ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚನೆ

Leave a comment
Leave a comment


