ತುಮಕೂರಿನ ಜೈನ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ತುಮಕೂರು ಜಿಲ್ಲಾ ಅಗ್ನಿ ಶಾಮಕ ದಳದ ವತಿಯಿಂದ ಮಕ್ಕಳಿಗೆ ಅಗ್ನಿಯಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಇಂದು ಪ್ರಾತ್ಯಾಕ್ಷಿತೆಯ ಮೂಲಕ ವಿವರವಾಗಿ ತಿಳಿಸಿಕೊಡಲಾಯಿತು. ಜೊತೆಗೆ ಮನೆ, ಕಛೇರಿ, ಶಾಲೆ ಮತ್ತು ಇನ್ನಿತರೆ ಸ್ಥಳಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿದರೆ ಅದರಿಂದ ಪಾರಾಗುವ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು ಜೊತೆಗೆ ಅಗ್ನಿ ಅನಾಹುತವಾದರೆ ಪ್ರಥಮ ಚಿಕಿತ್ಸೆಯ ಕುರಿತು ವಿವರವಾಗಿ ಅಗ್ನಿಶಾಮಕ ಸಿಬ್ಬಂದಿಗಳು ಶಾಲಾ ಮಕ್ಕಳಿಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಸುನೀತ ದಗ್ಗಲ್, ಬಸವರಾಜು, ಚೇತನ್, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



