ವಕೀಲರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ರೆ 3 ವರ್ಷ ಜೈಲು: ಹೊಸ ಮಸೂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಹಿನ್ನೆಲೆಯಲ್ಲಿ ಕಲಬುರ್ಗಿ ನ್ಯಾಯವಾದಿ ಸಂಘದ ಅಧ್ಯಕ್ಷರಾದ ಗುಪ್ತಲಿಂಗ್ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ ನ್ಯಾಯಾಲಯದ ಎದುರುಗಡೆ ಸಿಹಿ ಹಂಚಿ ಸಂಭ್ರಾಮಾಚರಣೆ.
ವಕೀಲರ ಮೇಲಿನ ಹಿಂಸಾಚಾರ ತಡೆದು ರಕ್ಷಣೆ ನೀಡುವ ಸಲುವಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023ನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು.
ಬೆದರಿಕೆ, ಅಡ್ಡಿ ,ಕಿರುಕುಳ ಅಥವಾ ಅವರೊಂದಿಗೆ ಅನುಚಿತ ಹಸ್ತಕ್ಷೇಪ ರಹಿತವಾಗಿ ತಮ್ಮ ಎಲ್ಲ ವೃತ್ತಿಪರ ಪ್ರಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗುವುದು, ದೇಶ-ವಿದೇಶಗಳಲ್ಲಿ ಮುಕ್ತವಾಗಿ ಪ್ರಯಾಣಿಸುವುದು, ಅವರ ಕಕ್ಷಿದಾರರೊಂದಿಗೆ ಸಮಾಲೋಚಿಸಲು ಅನುಕೂಲ ಆಗುವಂತೆ ಹಾಗೂ ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದ ತಮ್ಮ ವೃತ್ತಿಪರ ಸೇವೆ ಸಲ್ಲಿಸುವುದಾಗಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರಾಸಂಗಿಕ ವಿಷಯಗಳಿಗೆ ಅವರ ಮೇಲಿನ ಹಿಂಸೆಯನ್ನು ನಿಷೇಧಿಸುವುದು ಮತ್ತು ಅವರಿಗೆ ರಕ್ಷಣೆ ನೀಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದರೆ 6 ತಿಂಗಳಿಂದ 3 ವರ್ಷಗಳವರೆಗೆ ಕಾರಾಗೃಹ ಅಥವಾ 1 ಲಕ್ಷ ರೂ.ವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಒಳಗಾಗಬೇಕಾಗುತ್ತದೆ ಎಂಬುದನ್ನು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ. ಎಸ್ ಸಿ ಎಸ್ಪಿ, ಟಿ ಎಸ್ಪಿ ತಿದ್ದುಪಡಿ ವಿಧೇಯಕ: ಪ.ಜಾತಿ ಮತ್ತು ವರ್ಗದವರಿಗೆ ಎಸ್ಸಿ ಎಸ್ಪಿ, ಟಿ ಎಸ್ ಪಿ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳಲು ಅನುಕೂಲ ಮಾಡಲಾಗಿದೆ.
ಇದರ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯ ನ್ಯಾಯವಾದಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸೇರಿ ಪಟಾಕಿ ಸಿಡಿಸಿ ಮತ್ತು ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಎಸ್ ಪಾಟೀಲ್, ಉಪಾಧ್ಯಕ್ಷರಾದ, ಜೈಶೀಲಾ, ಧರ್ಮಣ್ಣ ಜೈನಪುರ್, ಪ್ರಧಾನ ಕಾರ್ಯದರ್ಶಿಗಳಾದ ಬಸವಲಿಂಗ ನಾಸಿ, ಫತ್ರುಬಿ ಕೆ ಶಾಹಾ,ನಿರ್ಮಲಾ ಬಿರಾದಾರ್ ಸೇರಿದಂತೆ ಎಲ್ಲಾ ವಕೀಲರು ಉಪಸ್ಥಿತರಿದ್ದರು.



