ಕಲಬುರಗಿ ಸೆಂಟ್ರಲ್ ಯೂನಿವರ್ಸಿಟಿಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಘಟನೆ: ಪೊಲೀಸರಿಂದ ತನಿಖೆ.


ಅಳಂದ ತಾಲ್ಲೂಕಿನ ಕಡಗಂಚಿಯ ಬಳಿ ಇರುವ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದ ಓಡಿಶಾದ ರಾಜ್ಯದ ವಿದ್ಯಾರ್ಥಿನಿ ಬಿ.ಎಸ್ಸಿ ತೃತೀಯ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ಬೆಳ್ಳಂ ಬೆಳಗೆ ಸ್ಫೋಟಕಗೊಂಡಿದೆ.
ಸಿಕ್ಕಿರುವ ಮಾಹಿತಿ ಪ್ರಕಾರ, ತನ್ನ ಜನ್ಮದಿನವನ್ನು ಸ್ನೇಹಿತರೊಂದಿಗೆ ಆಚರಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ, ಆದರೆ ಪ್ರಾಥಮಿಕ ತನಿಖೆಯಲ್ಲಿ ಇದು ಖಾಸಗಿ ಒತ್ತಡ ಅಥವಾ ಪ್ರೇಮ ಸಂಬಂಧಿತ ವಿಷಯವಾಗಿರಬಹುದು ಎಂದು ಶಂಕಿಸಲಾಗಿದೆ, ಸತ್ಯಶೋಧನೆಗೆ ಪೊಲೀಸರು ಮುಂದಾಗಿದ್ದಾರೆ.
ಸದ್ಯ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.



