ಸಂಗ್ರಹಿಸಲಾಗಿದೆ. ಈ ಹಣವನ್ನು ಶಾಲೆ, ಆಸ್ಪತ್ರೆಗಳ ಅಭಿವೃದ್ಧಿಗಾಗಿ ಖರ್ಚು ಮಾಡಲಾಗುವುದೆಂದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಗ್ರಾಮ ಪಂಚಾಯತಿ ಅಧ್ಯಕ್ಷರು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿ ಸಂಕಲ್ಪ ಮಾಡಬೇಕು. ಪಂಚಾಯತಿಯಲ್ಲಿ ಆರ್.ಓ.ಪ್ಲಾಂಟ್ಗಳನ್ನು ನಿರ್ವಹಣೆ ಮಾಡುತ್ತಿರುವ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳು ಆಯಾ ಪಂಚಾಯತಿಗಳಿಗೆ ಹಸ್ತಾಂತರಿಸಬೇಕು. ಆಶ್ರಯ ವಸತಿ ಯೋಜನೆಯಡಿ ಅರ್ಹ ಬಡವರಿಗೆ ನಿವೇಶನ ಕಲ್ಪಿಸಲು ಜಿಲ್ಲೆಯಲ್ಲಿ ಈಗಾಗಲೇ ೪೩೦ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಮುಂದಿನ ೧೫ ದಿನಗಳೊಳಗೆ ೧೦೦೦ ಎಕರೆ ಪ್ರದೇಶವನ್ನು ಗುರುತಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದೆಂದರಲ್ಲದೆ, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಉದ್ಯಾನವನಕ್ಕಾಗಿ ೩ ಎಕರೆ ಜಾಗ ಗುರುತಿಸಬೇಕೆಂದು ಪಿಡಿಓಗಳಿಗೆ ಸೂಚಿಸಿದರು. ಸ್ಮಶಾನ/ಖಬರ್ಸ್ಥಾನಗಳಿಲ್ಲದ ಗ್ರಾಮಗಳು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಕ್ರಮಕೈಗೊಳ್ಳಲಾಗುವುದು. ಗ್ರಾಮಗಳ ಅಭಿವೃದ್ಧಿಗಾಗಿ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿ ಹಾಗೂ ಯೋಜನೆಗಳ ಸಮಗ್ರ ಅನುಷ್ಟಾನಕ್ಕಾಗಿ ಪಂಚಾಯತಿ ಅಧ್ಯಕ್ಷರು, ಉಪಾಧ್ಯ÷ಕ್ಷರು ಹಾಗೂ ಪಿಡಿಓಗಳಿಗಾಗಿ ಒಂದೇ ಕಡೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯ ಧ್ಯೇಯೋದ್ದೇಶ ಈವರೆಗೂ ಸಾಕಾರಗೊಂಡಿಲ್ಲ. ಈ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದಲ್ಲಿ ಸಮಾನತೆ ಮಂತ್ರ ಯಶಸ್ಸು ಕಾಣುತ್ತದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಂಚಾಯತಿಗಳು ಗುಣಮಟ್ಟದ ಸೇವೆ ನೀಡಬೇಕು. ಎಲ್ಲಾ ಪಂಚಾಯತಿಗಳ ಅಭಿವೃದ್ಧಿಗಾಗಿ ಅಗತ್ಯ ಮಾರ್ಗದರ್ಶನ, ಸಹಕಾರವನ್ನು ಜಿಲ್ಲಾ ಪಂಚಾಯತಿಯಿAದ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ಸುರೇಶ್ ಗೌಡ ಮಾತನಾಡಿ, ಜಿಲ್ಲಾ ಪಂಚಾಯತಿಯಡಿ ೨೬ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮಪಂಚಾಯತಿಗಳಿಗೆ ನೇರವಾಗಿ ಅನುದಾನ ದೊರೆಯುತ್ತದೆ. ಗ್ರಾಮಪಂಚಾಯತಿಗಳು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೆ ಜನರಿಗೆ ಉತ್ತಮ ಸೇವೆ ನೀಡಬೇಕು. ಪಾರದರ್ಶಕತೆ ಆಡಳಿತ ಒದಗಿಸಲು ಗ್ರಾಮಪಂಚಾಯತಿ ಕಾಯ್ದೆ, ನಿಯಮಗಳನ್ನು ತಿಳಿದುಕೊಳ್ಳಬೇಕು. ಪಿಡಿಓ, ಕಾರ್ಯದರ್ಶಿ, ಬಿಲ್ ಕಲೆಕ್ಟರ್, ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರ ನಡುವೆ ಸಾಮರಸ್ಯ ಇಲ್ಲದೆ ಎಷ್ಟೋ ಪಂಚಾಯತಿಗಳು ಅಭಿವೃದ್ಧಿ ಕಾಣುತ್ತಿಲ್ಲ. ತುಮಕೂರು ಜಿಲ್ಲಾ ಕೇಂದ್ರಸ್ಥಾನದ ಸುತ್ತಮುತ್ತ ಇರುವ ಗ್ರಾಮಗಳಲ್ಲಿ ಅಭಿವೃದ್ಧಿ ಹಿನ್ನಡೆಯಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕರಿಗಳು ಗಮನ ಹರಿಸಬೇಕೆಂದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ದುಡಿಯುವ ಕೂಲಿ ಕಾರ್ಮಿಕ ಮಹಿಳೆಯರ ೩ ವರ್ಷದ ಮಕ್ಕಳ ಲಾಲನೆ-ಪಾಲನೆ ಮಾಡಲು ಕೂಸಿನ ಮನೆ ಎಂಬ ವಿನೂತನ ಯೋಜನೆಗೆ ಚಾಲನೆ ನೀಡಲಾಯಿತಲ್ಲದೆ
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳಿಗೆ ಸಾಂಕೇತಿಕವಾಗಿ ಲ್ಯಾಪ್-ಟಾಪ್ ವಿತರಣೆ, ನರೇಗಾ ಯೋಜನೆಯಡಿ ಪಂಚಾಯತಿಗಳಿಗೆ ಕಾರ್ಯಾದೇಶ ನೀಡಲಾಯಿತು. ಸಾಮಾಜಿಕ ಅರಣ್ಯ ವಿಭಾಗದಿಂದ ಸಸಿಗಳನ್ನು ಬೆಳೆಸುವ ಬಗ್ಗೆ ಹೊರತಂದಿರುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಕರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿ.ಪಂ. ನರಸಿಂಹಮೂರ್ತಿ, ಸಣ್ಣಮಸಿಯಪ್ಪ, ಹಾಲಸಿದ್ಧಪ್ಪ, ವಿವಿಧ ಇಲಾಖಾಧಿಕಾರಿಗಳು, ಗ್ರಾ.ಪಂ. ಅಧ್ಯ÷ಕ್ಷರು, ಉಪಾಧ್ಯಕ್ಷರು, ಪಿಡಿಓಗಳು ಹಾಜರಿದ್ದರು.
ಜನರ ನಿರೀಕ್ಷೆಗನುಗುಣವಾಗಿ ಪಂಚಾಯತಿಗಳಿAದ ಉತ್ತಮ ಸೇವೆ ಒದಗಿಸಲು ಕರೆ
Leave a comment
Leave a comment