ತುಮಕೂರು:ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸದ ಜೊತೆಗೆ,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳ ಬಗ್ಗೆ ನಿರ್ಲಕ್ಷ ತೋರಿದ್ದೇ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದ್ದಾರೆ.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಎಂ.ಎಲ್.ಸಿ. ಚಿದಾನಂದಗೌಡ ಅಭಿಮಾನಿ ಬಳಗ ಹಾಗೂ ವಿಧಾನಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ಬಳಗದವತಿಯಿಂದ ತುಮಕೂರು ನಗರ ಮತ್ತು ಗ್ರಾಮಾಂತರ ಶಾಸಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು,ಸರಕಾರದ ವಿರುದ್ದ ಇದ್ದ ಜನಾಕೋಶ್ರವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳದೆ ಹೋಗಿದ್ದು ಸಹ ಪಕ್ಷದ ಸೋಲಿಗೆ ಕಾರಣವಾಯಿತು ಎಂದರು.
ಬಿಜೆಪಿ ಪಕ್ಷದ ಹೊಸ ಪ್ರಯತ್ನದ ಫಲವಾಗಿ ಹೊಸಮುಖಗಳಿಗೆ ಟಿಕೇಟ್ ನೀಡಿದ್ದರಿಂದ ೫೩ ಜನರ ಹಿರಿಯರು ಪಕ್ಷ ಬಿಟ್ಟು ಹೊರ ನಡೆದರು.ಇದು ಒಂದು ರೀತಿಯ ಒಳ್ಳೆಯ ಬೆಳವಣಿಗೆಯಾದರೂ,ಅದರ ನಷ್ಟವನ್ನು ತುಂಬಿಕೊಳ್ಳಲು ನಮಗೆ ಸಮಯಾವಕಾಶ ದೊರೆಯಲಿಲ್ಲ.ನಮ್ಮ ಜಿಲ್ಲೆಯಲ್ಲಿಯೂ ಚಿಕ್ಕನಾಯಕನಹಳ್ಳಿಯ ಕೆ.ಎಸ್.ಕಿರಣಕುಮಾರ್,ಗುಬ್ಬಿಯ ಬೆಟ್ಟಸ್ವಾಮಿ ಮತ್ತು ತುಮಕೂರು ನಗರದ ಎಸ್.ಶಿವಣ್ಣ ಅವರುಗಳು ಪಕ್ಷದಿಂದ ಹೊರಹೋಗದಂತೆ ತಡೆಯುವ ಪ್ರಯತ್ನ ಆಗಬೇಕಿತ್ತು.ಇದರಿಂದ ನಾವುಗಳು ಐದು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಶಾಸಕ ಬಿ.ಸುರೇಶಗೌಡ ನುಡಿದರು.
ತುಮಕೂರು ನಗರ ಮತ್ತು ಗ್ರಾಮಾಂತರ ಶಾಸಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ

Leave a comment
Leave a comment


