ತುಮಕೂರು – ಈ ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಲಭಿಸಲಿದೆ ಈ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಗೊಳ್ಳಲಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಷಣ್ಮುಖಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ರಂಜಾನ್ ಹಬ್ಬದ ಪ್ರಯುಕ್ತ ತುಮಕೂರು ಗ್ರಾಮಾಂತರ ಕ್ಷೇತ್ರದ ಹಲವು ಮಸೀದಿಗಳಿಗೆ ಭೇಟಿ ನೀಡಿದ ಷಣ್ಮುಖಪ್ಪ ರವರು ರಂಜಾನ್ ಹಬ್ಬದ ಶುಭಶಯ ಕೋರಿದರು.
ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು ತಾವು ಗ್ರಾಮಾಂತರ ಕ್ಷೇತ್ರದಲ್ಲೀ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಿದ್ದು ಹಿಂದುಳಿದ ವರ್ಗಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾ ಗಿರುವುದರಿಂದ ಕಾಂಗ್ರೆಸ್ ಪಕ್ಷ ಈ ಬಾರಿ ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಿದ್ದು. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ದೀನ ದಲಿತರು ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಸಮುದಾಯ ಗಳು ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಬೇಕಾದರೆ ಕಾಂಗ್ರೆಸ್ ಪಕ್ಷ ಅನಿವಾರ್ಯ ವಾಗಿದ್ದು ಈ ಬಾರಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವುದ ರೊಂದಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಲಿದ್ದಾರೆ ಎಂದರು.
ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ ನಿರ್ಮಾಣ ವಾಗಿದೆ ಎಂದರು.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ ನಿರ್ಮಾಣ ವಾಗಿದೆ
Leave a comment
Leave a comment