ರಾಯಚೂರು: ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಘಟನೆ ಸೆ.5 ರಂದು ಗುರುವಾರ ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ನಡೆದಿದೆ.ಘಟನೆಯ ತೀವ್ರತೆಗೆ ನಾಲ್ಕೈದು ಮಕ್ಕಳ ಕಾಲುಗಳು ಕತ್ತರಿಸಿ ಹೋಗಿವೆ.ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ

ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಮಾನ್ವಿ ಹೊರ ವಲಯದ ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸುತ್ತಲಿನ ಹಳ್ಳಿಗಳಿಂದ ಮಕ್ಕಳನ್ನು ಬಸ್ ಮೂಲಕ ನಿತ್ಯ ಕರೆ ತರುವಾಗ ರಾಯಚೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.ಘಟನಾಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. ಮಾನವಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.