ಕರ್ನಾಟಕ ರಾಜ್ಯದ ವಿಧಾನಪರಿಷತ್ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಜೂ.3 ರಂದು ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ಬಾಬು ಹೇಳಿದರು.
ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ಆಗ್ನೇಯ ಶಿಕ್ಷಕ ಕ್ಷೇತ್ರದ ವಿಧಾನಪರಿಷತ್ಗೆ ಇಲ್ಲಿಯವರೆಗೆ ಒಟ್ಟು 23514 ಮತದಾರರು ನೋಂದವಾಣೆಯಾಗಿದ್ದು, ತುಮಕೂರು ಜಿಲ್ಲೆಯಿಂದ 7599, ಚಿತ್ರದುರ್ಗ ಜಿಲ್ಲೆ ಯಿಂದ 4615, ಕೋಲಾರ ಜಿಲ್ಲೆಯಿಂದ 4142, ದಾವಣಗೆರೆ ಜಿಲ್ಲೆಯಿಂದ 3948, ಚಿಕ್ಕಬಳ್ಳಾಪುರ ಜಿಲ್ಲೆಯಿಂದ 3510 ಮತ ದಾರರು ತಮ್ಮ ಹೆಸರನ್ನು ನೋಂದಾಯಿಸಿ ದ್ದಾರೆ. ಈ 6 ಕ್ಷೇತ್ರಗಳಿಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದರು.
2017-18ನೇ ಸಾಲಿನಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರು ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರಿಗೆ ಸಂಬoಧಪಟ್ಟoತೆ ಅಂದಿನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ತನ್ವೀರ್ಸೇಟ್, ಶಿಕ್ಷಕರ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಹಾಗೂ ಶಿಕ್ಷಣ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ನಿರಂತವಾಗಿ 2 ದಿನ ಸುಮಾರು 7 ಗಂಟೆ ಸುದೀರ್ಘ ಸಭೆ ನಡೆಸಿ ಸಮಸ್ಯೆಗೆ ಸ್ಪಂದಿಸಿದ್ದರು ಎಂದರು.
ಮುಖ್ಯಮoತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವರಾದ ಮಧುಬಂಗಾರಪ್ಪ, ಸುಧಾಕರ್, ಶಿಕ್ಷಕರು, ಉಪನ್ಯಾಸಕರ ಸಮಸ್ಯೆ ಗಳಿಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿ ನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪ್ರಸಕ್ತ ಸಾಲಿನ ಅಯವ್ಯಯದಲ್ಲಿ 44,422 ಕೋಟಿ ರೂ. ಹಣವನ್ನು ಶಿಕ್ಷಕ ಕ್ಷೇತ್ರಕ್ಕೆ ನೀಡಿದ್ದು, ಮೂಲಭೂತ ಸೌಕರ್ಯಗಳಿಗಾಗಿ 850 ಕೋಟಿ ಅನುದಾನವನ್ನು ಒದಗಿಸಿದ್ದಾರೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಸರ್ಕಾರಿ ನೌಕರರಾಗಿ ಸಾಕಷ್ಟು ಅನುಭವ ಹೊಂದಿದ್ದು ಸಮರ್ಥರಾಗಿರುವ ಇವರಿಗೆ ಕ್ಷೇತ್ರದ ಮತದಾರರು ಸಹಕಾರ ನೀಡಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಆಗ್ನೇಯ ಶಿಕ್ಷಕ ಕ್ಷೇತ್ರದ ವಿಧಾನಪರಿಷತ್ಗೆ ಇಲ್ಲಿಯವರೆಗೆ ಒಟ್ಟು 23514 ಮತದಾರರು
Leave a comment
Leave a comment