AIDSO, ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ, ಇಂದು ಕಲಬುರಗಿ ನಗರದ ರೋಟರಿಸ್ : ವಾಲ್ ಪ್ಯಾರಿಸ್ ಸಭಾಂಗಣದಲ್ಲಿ ಏರ್ಪಡಿಸಿದ ಕಲಬುರಗಿ ಜಿಲ್ಲಾ ಮಟ್ಟದ 12ನೇ ವಿದ್ಯಾರ್ಥಿಗಳ ಸಮ್ಮೇಳನಕ್ಕೆ ಅತಿಥಿಗಳಾಗಿ ಆಗಮಿಸಿದಂತಹ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ, ಡಾ. ರಮೇಶ್, ಲಂಡನ್, ಏ ಸರ್ ಅವರು ಮಾತನಾಡುತ್ತಾ, ಸಮಾಜದ ಬಗ್ಗೆ ವಿದ್ಯಾರ್ಥಿಗಳು ಅರಿವು ಮೂಡಿಸಿಕೊಳ್ಳಬೇಕು ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞಾಮಟ್ಟವನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನೀತಿಗಳ
ಸಮ್ಮೇಳನದ ಪ್ರತಿನಿಧಿಗಳನ್ನು ಉದ್ದೇಶಿಸಿ ಎಐಡಿಎಸ್ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಅವರು ಮಾತನಾಡಿ ರಾಜ್ಯದಲ್ಲಿ ಬಡ ಮಕ್ಕಳ ಶಿಕ್ಷಣವನ್ನು ಸಂಪೂರ್ಣವಾಗಿ ಕಸಿಯುವ ಎನ್.ಇ.ಪಿ 2020 ತೆಗೆದು ಹಾಕಲು ಮುಖ್ಯ ಕಾರಣ ವಿದ್ಯಾರ್ಥಿಗಳ ಹೋರಾಟ ರಾಜ್ಯ ಶಿಕ್ಷಣ ನೀತಿಯಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ‘ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು, ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತ ಆಗಬಾರದು, ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ, ಡಾ ಸಹಾಯ ಪಡೆಯುವ ಬದಲು, ಜನಗಳಿಂದ ಸಂಗಹಿಸಿರುವ ತೆರಿಗೆ ಹಣದಲ್ಲಿ ಸರ್ಕಾರವೇ ನೀಡಬೇಕು, ವಿದೇಶಿ ನೇರ ಬಂಡವಾಳ ಹೂಡಿಕೆ ಹೆಸರಿನಲ್ಲಿ ವಿದೇಶಿ ವಿವಿಗಳನ್ನು ತೆರೆಯಲು ಅವಕಾಶ ಕೊಡಬಾರದು, ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣದ ಹೆಸುವು ಮೌಲ್ಯಗಳನ್ನು ಕಡೆಗಣಿಸಬಾರದು, ಈ ಅಂಶಗಳನ್ನು ಗಮನಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು ಎಂದು ಆಗ್ರಹಿಸಿದರು.
ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಎಐಡಿಎಸ್ ಜಿಲ್ಲಾ ಅಧ್ಯಕ್ಷರಾದ ಹಣಮಂತ ಎಸ್ ಹೆಚ್ ರವರು ಮಾತನಾಡುತ್ತ, ವಿದ್ಯಾರ್ಥಿಗಳ ಬೇಡಿಕೆಗಳಂತೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು, ಕಲಬುರ್ಗಿ ಜಿಲ್ಲೆಯಲ್ಲಿಯೂ ಕೂಡ ಒಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಬೇಕು ಮತ್ತು ವಾಡಿ ಪಟ್ಟಣದಲ್ಲಿ ಸರ್ಕಾು ಪದವಿ ಪೂರ್ವ ಕಾಲೇಜನ್ನ ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಪ್ರತಿ ಹಳ್ಳಿಗಳಿಗೂ ವಿದ್ಯಾರ್ಥಿಗಳು, ಸಮಯಕ್ಕೆ ಅನುಗುಣವಾಗಿ ಬಸ್ಸು ವ್ಯವಸ್ಥೆಯನ್ನು ಕಲ್ಪಿಸಲು ಆಗ್ರಹಿಸಿದರು.
ವಿದ್ಯಾರ್ಥಿಗಳು ಭಗತ್ ಸಿಂಗ್, ನೇತಾಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳುತ್ತ ಪರಿಪೂರ್ಣ ಉನ್ನತ ಜಾರಿತ್ರೆಯುಳ್ಳ ವ್ಯಕ್ತಿತ್ವಗಳಾಗಿ ಹೊರಹೊಮ್ಮಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ವೇದಿಕೆ ಮೇಲೆ ಉಪಾಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟೇಶ ದೇವದುರ್ಗ, ಪ್ರೀತಿ, ದೋಡ್ಡಮನಿ, ಗೋವಿಂದ ಯಳವಾರ, ನಾಗರಾಜ್, ಸಿದ್ದಾರ್ಥ, ಅಜಯ್, ಸ್ಪೂರ್ತಿ, ರಾಹುಲ್ .ಯುವರಾಜ್, ಬಾಬು ಸೇರಿ ನೂರಾರೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.,