ಶಿಕ್ಷಣ ಸೌಲಭ್ಯ ಒದಗಿಸಲು ಸಂಘಸAಸ್ಥೆಗಳು ನೆರವಾಗಲಿ’
ಬಡ್ಡಿಹಳ್ಳಿ ಶಾಲಾ ಕಟ್ಟಡ ಉದ್ಘಾಟಿಸದ ಸಚಿವ ಕೆ.ಎನ್.ರಾಜಣ್ಣ ಮನವಿ
ತುಮಕೂರು: ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು, ಶಕ್ತಿ ಇರುವವರು ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಬೇಕಾದ ಮೂಲಭೂತ ಸೌಕರ್ಯ ಒದಗಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ, ವಿದ್ಯೆ ವಂಚಿತ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಸೋಮವಾರ ನಡೆದ ಸಮಾರಂಭದಲ್ಲಿ ನಗರದ ಬಡ್ಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಸಂಸ್ಥೆಯವರು ನಿರ್ಮಿಸಿಕೊಟ್ಟಿರುವ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ, ಮಕ್ಕಳ ಬದುಕು ರೂಪಿಸುವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಆಸ್ತಿಯನ್ನು ಸೃಷ್ಟಿಮಾಡಲಾಗುವುದಿಲ್ಲ, ಶಿಕ್ಷಣವನ್ನು ಆಸ್ತಿ ರೂಪದಲ್ಲಿ ನೀಡಬೇಕು ಎಂದರು.
ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು, ಶಕ್ತಿ ಇರುವವರು ವಿದ್ಯಾಭ್ಯಾಸಕ್ಕೆ ಒತ್ತು ನೀಡಿ
Leave a comment
Leave a comment