ತುಮಕೂರು ಅಂಬೇಡ್ಕರ್ ಸೇನೆ ಮಹಿಳಾ ಘಟಕದ ವತಿಯಿಂದ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಸುಮಾರವರು ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಧ್ಯಕ್ಷರನ್ನಾಗಿ ರುಕ್ಮಿಣಿ, ಉಪಾಧ್ಯಕ್ಷರನ್ನಾಗಿ ಕೋಮಲ ಅವರನ್ನು ಆಯ್ಕೆ ಮಾಡಿ ಮಾತನಾಡಿದ ಜಿಲ್ಲಾಧ್ಯಕ್ಷರು ಮುಂದಿನ ದಿನಗಳಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಅಂಬೇಡ್ಕರ್ ಸೇನೆಯನ್ನು ಬಲಪಡಿಸುವುದರೊಂದಿಗೆ, ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಗೂ ಸಹ ಅಂಬೇಡ್ಕರ್ರವರ ಬಗ್ಗೆ ಹಾಗೂ ಭಾರತದ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯ ತಮ್ಮಿಂದ ಆಗಬೇಕಾಗಿದೆ, ಈ ನಿಟ್ಟಿನಲ್ಲಿ ತಮ್ಮಗಳನ್ನು ಆಯ್ಕೆ ಮಾಡಲಾಗಿದ್ದು, ತಾವುಗಳು ಸಹ ಮತ್ತಷ್ಟು ಜನರನ್ನು ಅಂಬೇಡ್ಕರ್ ಸೇನೆಯ ಸದಸ್ಯರನ್ನಾಗಿ ಮಾಡುವುದರೊಂದಿಗೆ ಸಂಘಟನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಶುಭ ಹಾರೈಸಿದರು.