ಇಂದು ಪೋಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ವಾರ್ಷಿಕ ಸಮಾವೇಷ-2023 ಆಯೋಜಿಸಲಾಗಿತ್ತು. ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಅತ್ಯುತ್ತಮಗೊಳಿಸಲು ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ಬದ್ದು ಎಂಬುದನ್ನು ಮನಗಂಡು ಕರ್ತವ್ಯ ನಿರ್ವಹಿಸಲು ಮುಂದಾಗಬೇಕೆಂದು ಸೂಚನೆ ನೀಡಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಜೀರ್ ಅಹ್ಮದ್ ಮತ್ತು ಗೋವಿಂದ ರಾಜ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು




