AIKKMS ಕಲ್ಬುರ್ಗಿ ಜಿಲ್ಲಾ ಸಮಿತಿಯಿಂದ ಇಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಮನವಿ ಪತ್ರವು ಪ್ರಸಕ್ತ ಕಲ್ಬುರ್ಗಿ ಜಿಲ್ಲೆಯಲ್ಲಿ ಸಮರ್ಪಕ ಮಳೆ ಬರದೇ ಇರುವ ಕಾರಣ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಸಹ ಮನವಿ ಪತ್ರವನ್ನು ಸ್ವೀಕರಿಸಿದರು. ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಕಾ. ಗಣಪತ್ ರಾವ್ ಕೆ ಮಾನೆ ಕಾರ್ಯದರ್ಶಿ ಮಹೇಶ್ ಎಸ್ ಬಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ವಿಶ್ವನಾಥ್ ಸಿಂಗೆ ಮತ್ತು ಹರೀಶ್ ಸಂಗಾಣಿ, ಶಂಕರ್ ಜಾದವ್ ರವರು ಉಪಸ್ಥಿತರಿದ್ದರು.