ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
ತುಮಕೂರು(ಕ.ವಾ) ಮೇ.೨೩: ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ ೩ ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್, ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪೆರಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ೩೫ ಅಂಕಗಳೊAದಿಗೆ ಉತ್ತೀರ್ಣರಾದ ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟç ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯ ಕಲ್ಪಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು (ಸಾಮಾನ್ಯ ವರ್ಗದ ಅಭ್ಯರ್ಥಿಗಳು ೧೦೦ ರೂ. ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಪ್ರವರ್ಗ-೧ಕ್ಕೆ ಸೇರಿದವರಿಗೆ ೫೦ ರೂ.ಗಳ) ಮೈಸೂರಿನಲ್ಲಿ ಸಂದಾಯವಾಗುವAತೆ ಪ್ರಾಂಶುಪಾಲರು, ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್, ಮೈಸೂರು-೫೭೦೦೦೬ ಇವರಿಗೆ ನಗದು ಅಥವಾ ಡಿಡಿಯನ್ನು ಕಳುಹಿಸಿ ಪ್ರವೇಶ ಅರ್ಜಿಗಳನ್ನು ಪಡೆಯಬಹುದು ಅಥವಾ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಭಾಗಶಃ ಮತ್ತು ಪೂರ್ಣ ಅಂಧತ್ವ (೬/೬೦ ಅಥವಾ ೨೦/೨೦೦ ಸ್ನೆಲೆನ್) ಹೊಂದಿರುವ ವಿಶೇಷ ಚೇತನರು ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಉಳಿದಂತೆ ಎಲ್ಲಾ ಕೋರ್ಸ್ಗಳಿಗೆ ಮೂಳೆ ಮತ್ತು ಕೀಲು ಅಂಗವಿಕಲತೆ(ಶೇ.೪೦ ಮತ್ತು ಮೇಲ್ಪಟ್ಟ) ಹಾಗೂ ಕಿವುಡು ಮತ್ತು ಮೂಕ ಅಂಗವಿಕಲತೆ(೬೦ ಡಿಬಿ ಮತ್ತು ಮೇಲ್ಪಟ್ಟ) ಹೊಂದಿದ್ದವರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್: ತಿತಿತಿ.ರಿssಠಿಜಚಿ.oಡಿg / ಇ-ಮೇಲ್ ಅಥವಾ ದೂ.ವಾ.ಸಂ. ೯೮೪೪೬೪೪೯೩೭ನ್ನು
ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
Leave a comment
Leave a comment