ನಗದು ಅನುದಾನಕ್ಕಾಗಿ ಅರ್ಜಿ ಆಹ್ವಾನ
ತುಮಕೂರು(ಕ.ವಾ.)ಆ.೨೪: ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ.೬೦ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆಎಸ್ ತಿಮ್ಮಯ್ಯ ನಗದು ಅನುದಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಒಂದು ಜಿಲ್ಲೆಗೆ ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ಅಭ್ಯರ್ಥಿಗಳು ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಬ್ಬರನ್ನು ನಗದು ಅನುದಾನಕ್ಕಾಗಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ ೨೦, ೨೦೨೩ ಕಡೆಯ ದಿನವಾಗಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಡಕಗಳೊಂದಿಗೆ ತ್ರಿಪ್ರತಿಯಲ್ಲಿ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಭವನ, ನಂ.-೫೮, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು-೨೫ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. ೦೮೦-೨೫೫೮೮೭೧೮ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆಎಸ್ ತಿಮ್ಮಯ್ಯ ನಗದು ಅನುದಾನ ನೀಡಲು ಅರ್ಜಿ ಆಹ್ವಾನ

Leave a comment
Leave a comment