ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ
ತುಮಕೂರು(ಕ.ವಾ) ಮೇ.೨೩: ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ/ಪರಿಶಿಷ್ಟ ವರ್ಗಗಳ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಡಾ: ಬಿ.ಆರ್.ಅಂಬೇಡ್ಕರ್/ ಇಂದಿರಾ ಗಾಂಧಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ ೭, ೮ ಮತ್ತು ೯ನೇ ತರಗತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ತಮ್ಮ ಮಕ್ಕಳ ವಸತಿ ಶಾಲೆಗಳ ಪ್ರವೇಶ ಬಯಸುವ ಪೋಷಕರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮೇ ೨೯ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನತುಮಕೂರು
Leave a comment
Leave a comment