ಸಾಲ ಸೌಲಭ್ಯಕ್ಕಾಗಿ ಅಲೆಮಾರಿ/ಅರೆಅಲೆಮಾರಿ ಸಮುದಾಯದವರಿಂದ ಅರ್ಜಿ ಆಹ್ವಾನತುಮಕೂರು(ಕ.ವಾ.)ಅ.೧೩: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯಕ್ಕಾಗಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರಿಂದ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಬಯಸುವವರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-೧ರಲ್ಲಿ ಬರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿ ಮತ್ತು ಉಪಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ೯೮,೦೦೦/- ರೂ., ಪಟ್ಟಣ ಪ್ರದೇಶದವರಿಗೆ ೧,೨೦,೦೦೦/- ರೂ.ಗಳೊಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಅರಿವು ಯೋಜನೆಗಾಗಿ ಅರ್ಜಿ ಸಲ್ಲಿಸುವವರ ವಯೋಮಿತಿ ೧೮ ರಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿದಾರರ ವಯೋಮಿತಿ ೨೧ ರಿಂದ ೪೫ ವರ್ಷದ ಮಿತಿಯಲ್ಲಿರಬೇಕು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಯೋಜನೆಗೆ ಅರ್ಜಿ ಸಲ್ಲಿಸುವವರ ವಾರ್ಷಿಕ ವರಮಾನ ೮ ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಒಂದೇ ಕಡೆ ಹೊಂದಿಕೊAಡAತೆ ೨ ಎಕರೆ ಜಮೀನು ಹೊಂದಿರಬೇಕು. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ತಾಳೆಯಾಗಬೇಕು. ಅರ್ಜಿ ಸಲ್ಲಿಸಲು ನವೆಂಬರ್ ೩ ಕೊನೆಯ ದಿನವಾಗಿದೆ. ಆಸಕ್ತರು ಕರ್ನಾಟಕ ಒನ್, ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರ ಹಾಗೂ ಗ್ರಾಮಒನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kaad.karnataka.gov.in ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೯೬೦೬೦೬೬೩೮೯ ಅಥವಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: ೦೮೧೬-೨೦೦೫೦೦೮ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.