ಕಲಬುರಗಿ :ಕಾಂಗ್ರೇಸ್ ಸರ್ಕಾರ ಜನರಿಗೆ ಕುಡಿಯಲು ನೀರು ಕೊಡೋಕು ಯೋಗ್ಯತೆ ಇಲ್ಲದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ದಿಡೀರನೇ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಲ್ಲಿನ ರೋಗಿಗಳ ಅರೋಗ್ಯವನ್ನು ವಿಚಾರಿಸಿದರು. ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ತೊಂದರೆಯ ಬಗ್ಗೆ ಗಮನ ಹರಿಸದೆ ಇದ್ದರೆ ರೋಗಿಗಳ ಗತಿ ಏನು, ಕುಡಿಯುವ ನೀರು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ಸೂಕ್ಷ್ಮವಾಗಿ ಗಮನ ಹರಿಸಿ ಎಂದು ಆಸ್ಪತ್ರೆಯ ಅಧಿಕಾರಿಗಳಿಗೆ ತಾಕಿತ್ತು ಮಾಡಿದರು, ಅಷ್ಟೇ ಅಲ್ಲದೆ ಕಳೆದ ಕೇಲವು ದಿನಗಳ ಹಿಂದೆ ಕೋಲಿ ಸಮಾಜದ ಮಹಿಳೆಗೆ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮೃತ ಪಟ್ಟಿರುವ ಘಟನೆ ಬೆಳಕಿಗೆ ಬಂದಿರುವದನ್ನು ಗಮನಿಸಿದ ಅವರು ಸಾವನ್ನೊಪ್ಪಿದ ಮಹಿಳೆಯರ ಸಂಬಂಧಿಕರ ಎದುರಲ್ಲಿಯೇ ಆಸ್ಪತ್ರೆಯ ವೈದ್ಯರಿಗೆ ಕ್ಲಾಸ್ ತೆಗೆದುಕೊಂಡರು. ತದನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂತಹ ನಿರ್ಲಕ್ಷತನ ಕೇವಲ ಕಲಬುರಗಿಯಲ್ಲಿ ಅಷ್ಟೇ ಅಲ್ಲ ಇಡಿ ರಾಜ್ಯದಲ್ಲಿಯು ಕೂಡ ನಡೆದಿವೆ, ಸರ್ಕಾರ ಕಣ್ಮುಚ್ಚಿ ಕುಳಿತಿರುವದು ನಾಚಿಕೆಗೆಡಿನ ಸಂಗತಿ ಎಂದು ಸರ್ಕಾರದ ವಿರುದ್ದ ಅಸಮಾಧಾನ ಹೊರ ಹಾಕಿದರು. ಈ ಸಂದರ್ಭದಲ್ಲಿ ಅವ್ವಣ್ಣ ಮ್ಯಾಕೇರಿ, ಶಶಿಲ್ ನಮೋಶಿ, ಶರಣಪ್ಪ ತಳವಾರ್, ದತ್ತಾತ್ರೇಯ ಪಾಟೀಲ್ ರೇವೂರ್, ಶಿವರಾಜ್ ಪಾಟೀಲ್ ರದ್ದೇವಾಡಗಿ ಸಂತೋಷ ಹಾದಿಮನಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.