ತುಮಕೂರು:ತುಮಕೂರು ವಿಧಾನಸಭಾ ಕ್ಷೇತ್ರದ ೩೫ ಗ್ರಾಮಪಂಚಾಯಿತಿಗಳಲ್ಲಿ ೩ರಲ್ಲಿ ಕಾಡುಗೊಲ್ಲರಿಗೆ, ಒಂದರಲ್ಲಿ ಗೊಲ್ಲ ಸಮುದಾಯಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ಕಲ್ಪಿಸುವ ಮೂಲಕ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ತಿಳಿಸಿದ್ದಾರೆ.

ಗ್ರಾಮಾಂತರ ಬಿಜೆಪಿ ಕಚೇರಿ ಶಕ್ತಿಸೌಧದಲ್ಲಿಂದು ಆಯೋಜಿಸಿದ್ದ ಗೊಲ್ಲ ಸಮುದಾಯದ ಮುಖಂಡರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಕ್ಷೇತ್ರದ ಹಿರೇಹಳ್ಳಿ, ಗಳಿಗೇನಹಳ್ಳಿ, ನಿಡುವಳಲು ಗ್ರಾಮಪಂಚಾಯಿತಿಗಳಲ್ಲಿ ಕಾಡುಗೊಲ್ಲ ಸಮುದಾಯಕ್ಕೆ, ಸೀತಕಲ್ಲು ಗ್ರಾಮಪಂಚಾಯಿತಿಯಲ್ಲಿ ಗೊಲ್ಲ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದರು.
ಶಿರಾ ಉಪಚುನಾವಣೆಯಲ್ಲಿ ಹಾಗೂ ಇನ್ನಿತರ ಸಂದರ್ಭದಲ್ಲಿ ನಾನು ಗೊಲ್ಲ ಸಮುದಾಯಕ್ಕೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಅತ್ಯಂತ ನಿಕೃಷ್ಟ ಸ್ಥಿತಿಯಲ್ಲಿದ್ದನ್ನು ಕಣ್ಣಾರೆ ಕಂಡು, ಇವರ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಅಭಿವೃದ್ದಿಗಾಗಿ ಕಾಡುಗೊಲ್ಲ ಅಭಿವೃದ್ದಿ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿಟ್ಟು, ನಿಗಮವನ್ನು ಸ್ಥಾಪಿಸಿ, ಚಂಗಾವರ ಮಾರಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇನೆ.ಅಲ್ಲದೆ ಕ್ಷೇತ್ರದ ೩೮ ಗೊಲ್ಲರಹಟ್ಟಿಗಳಿಗೂ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ಅಗತ್ಯವಿರುವರಿಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ನೀಡಿ, ಅವರ ಸಮಗ್ರ ಅಭಿವೃದ್ದಿಗೆ ಕೆಲಸ ಮಾಡಿದ್ದೇನೆ.ಹಾಗಾಗಿ ಮೇ.೧೦ ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿ ಗೆಲುವು ತಂದುಕೊಡುವAತೆ ಮನವಿ ಮಾಡಿದರು.