ತುಮಕೂರು:ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ನನಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ.ಅಲ್ಲದೆ ಪಕ್ಷದ ಕಾರ್ಯಕರ್ತರು,ಮುಖಂಡರು ಹಗಲಿರುಳೆನ್ನದೆ ದುಡಿದು ನನ್ನನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ.ಅವರ ಆಶೀರ್ವಾದದ ಜೊತೆಗೆ,ಶ್ರೀಸಿದ್ದಗಂಗಾ ಶ್ರೀಗಳ ಆಶೀರ್ವಾದಕ್ಕಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ತಮ್ಮ ಕುಟುಂಬದ ಸದಸ್ಯರೊಂದಿಗೆ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ,ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ದಲಿಂಗಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ಯಾವುದೇ ಒಳ್ಳೆಯ ಕೆಲಸ ಮಾಡುವ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯುವುದು ವಾಡಿಕೆ. ಹಾಗಾಗಿ ನಾನು ಕೂಡ ವಿಧಾನಸಭೆ ಪ್ರವೇಶಿಸುವ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದರು.
![ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿ.ವೈ.ವಿಜಯೇಂದ್ರ 2 IMG 20230515 WA0014](https://targettruth.in/wp-content/uploads/2023/05/IMG-20230515-WA0014-1024x543.jpg)