ಬೆಂಗಳೂರು ಸಮಗ್ರ ಅಭಿವೃದ್ಧಿ ಸಂಬಂಧ ಸಮಾಲೋಚನೆ ನಡೆಸಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಬೆಂಗಳೂರು ನಗರದ ಎಲ್ಲ ಶಾಸಕರು, ಸಂಸದರು, ಎಂಎಲ್ಸಿಗಳ ಸಭೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಸಂಸದರಾದ ಡಿ ಕೆ ಸುರೇಶ್, ತೇಜಸ್ವಿ ಸೂರ್ಯ, ಪಿ ಸಿ ಮೋಹನ್, ರಾಜ್ಯಸಭೆ ಸದಸ್ಯರಾದ ಜಿ ಸಿ ಚಂದ್ರಶೇಖರ್, ಶಾಸಕರಾದ ರಿಜ್ವಾನ್ ಅರ್ಶದ್, ಎ ಸಿ ಶ್ರೀನಿವಾಸ್, ಎ ಕೃಷ್ಣಪ್ಪ, ರವಿ ಸುಬ್ರಮಣ್ಯ, ಟಿ ಎ ಶರವಣ, ಗೋಪಾಲಯ್ಯ, ಗರುಡಾಚಾರ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.
