12ನೇ ಶತಮಾನದಲ್ಲಿ ಕಾಯಕ ತತ್ವ, ದಾಸೋಹ ತತ್ವ ಸಾರುವ ಮೂಲಕ ಕಾಯಕ, ದಾಸೋಹದ ಮಹತ್ವ ಹೇಳಿದ ಬಸವಣ್ಣನವರು ಸರ್ವರು ಸಮಾನರು ಎಂಬ ಸಂದೇಶ ನೀಡಿ ಸೌಹಾರ್ದ ಸಮಾಜ ನಿರ್ಮಾಣಕ್ಕೆ ನಾಂದಿಯಾದವರು. ಶರಣೆ ಹೆಮರೆಡ್ಡಿ ಮಲ್ಲಮ್ಮ ಅವರೂ ಸಮಾಜ ಸುಧಾರಣೆಗೆ ಶ್ರಮಿಸಿದರು. ಇಂತಹ ಸಾರ್ವಕಾಲಿಕ ಮಹನೀಯರ ಆದರ್ಶಗಳನ್ನು ಮುಂದಿನ ತಲೆಮಾರಿಗೂ ತಲುಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ತುಮಕೂರು ವೀರಶೈವ ಸಮಾಜ ಸೇವಾ ಸಮಿತಿ, ಜಿಲ್ಲಾ ರೆಡ್ಡಿ ಜನಸಂಘದ ಆಶ್ರಯದಲ್ಲಿ ಶುಕ್ರವಾರ ನಗರದ ಡಾ.ಗುಬ್ಬಿ ವೀರಣ್ಣ ರಂಗಮoದಿರದಲ್ಲಿ ನಡೆದ ಜಗಜ್ಯೋತಿ ಬಸವೇಶ್ವರರು ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತುತ್ಸವ ಉದ್ಘಾಟಿಸಿ ಮಾತನಾಡಿದರು.
ಮನುಷ್ಯರೆಲ್ಲರೂ ಸಮಾನರು. ಮನುಷ್ಯರ ನಡುವೆ ಜಾತಿ ಬೇಧ ಇರಬಾರದು ಎಂದು ಸಾರಿದ್ದ ಬಸವಣ್ಣನವರು ಜಾತಿ ನಿವಾರಣೆಗೆ ಸಾಮಾಜಿಕ ಕ್ರಾಂತಿ ಮಾಡಿದ್ದರು. ಅಂತರ್ಜಾತಿ ವಿವಾಹಗಳನ್ನು ಬೆಂಬಲಿಸಿದ್ದರು. ಸಮಾಜದ ಅನಿಷ್ಟಗಳ ನಿರ್ಮೂಲನೆಗಾಗಿ ಆಡು ಭಾಷೆಯ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಹೇಳಿದರು.
ಬಸವಣ್ಣನವರು ಸರ್ವರು ಸಮಾನರು ಎಂಬ ಸಂದೇಶ ನೀಡಿ ಸೌಹಾರ್ದ ಸಮಾಜ ನಿರ್ಮಾಣಕ್ಕೆ ನಾಂದಿಯಾದವರು. Tumkur
Leave a comment
Leave a comment