ತುಮಕೂರಿನ ದಲಿತ ಜನಾಂದೋಲನ ಸಮಿತಿವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ರಾಂ ಅವರ ಹುಟ್ಟು ಹಬ್ಬದ ಕಾರ್ಯಕ್ರಮದ ಅಂಗವಾಗಿ ನಗರದ ಟೌನ್ ಹಾಲ್ ವೃತ್ತದಿಂದ ಗುಂಚಿ ಚೌಕದವರೆಗೆ ಇರ್ವರು ಮಹನೀಯರ ಭಾವಚಿತ್ರಗಳನ್ನು ಬೆಳ್ಳಿಯ ರಥದಲ್ಲಿರಿಸಿ,ವಿವಿಧ ಜನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಲಾಯಿತು.