ತುಮಕೂರು: ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಧ್ವಜಸ್ತಂಭದಲ್ಲಿ ಹಾರಿಸಿದ್ದ ಹನುಮ ಧ್ವಜ ತೆರವುಗೊಳಿಸಿ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆಪಾದಿಸಿ, ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದ ಜಿಲ್ಲಾಧಿಕಾರಿ ಕÀಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯಿಂದ ಬಹುಸಂಖ್ಯಾತ ಹಿಂದುಗಳ ಧಾರ್ಮಿಕ ಭಾವನೆಗೆ ನೋವು ಉಂಟುಮಾಡಿದೆ. ಸರ್ಕಾರ ಈ ಧೋರಣೆ ಕೈಬಿಡದಿದ್ದರೆ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗಬಹುದು. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೋರಿ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಕಾಂಗ್ರೆಸ್ನವರಿಗೆ ನಮ್ಮ ಧಾರ್ಮಿಕ ಆಚರಣೆಯ ಕೇಸರಿ ಧ್ಜಜ ಕಂಡರೆ ಕಣ್ಣುರಿ. ಹಿಂದುಗಳು ತಮ್ಮ ಧರ್ಮ, ಸಂಸ್ಕೃತಿಯ ಆಚರಣೆಗೆ ಸರ್ಕಾರ ಅವಕಾಶ ನೀಡದೆ ಪದೇಪದೆ ಅಡ್ಡಿ ಮಡುವ ಪ್ರಯತ್ನ ಮಾಡುತ್ತಿದೆ. ಮಂಡ್ಯದ ಕೆರಗೋಡಿನ ಆಂಜನೇಯ ದೇವಸ್ಥಾನದ ಬಳಿ ಭಕ್ತರು ಹಾಕಿದ್ದ ಹನುಮ ಧ್ವಜ ತೆರವು ಮಾಡುವ ಮೂಲಕ ಸರ್ಕಾರ ಹಿಂದುಗಳ ಭಾವನೆಗೆ ಧಕ್ಕೆ ತಂದಿರುವುದನ್ನು ಖಂಡಿಸುತ್ತೇವೆ ಎಂದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಭಾರತದಲ್ಲಿ ಹಿಂದೂ ಧರ್ಮದ ಧ್ವಜ ಹಾಕುವುದು ಮಹಾಪಾಪ ಎನ್ನುವಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ತುಮಕೂರಿನಲ್ಲಿ ದಿನಬೆಳಗಾದರೆ ಕೇಸರಿ ಧ್ವಜ ತೆರವುಗೊಳಿಸುವ ಪ್ರಯತ್ನವನ್ನು ಪೊಲೀಸರು ಮಾಡುತ್ತಲೇ ಇದ್ದಾರೆ. ಕಳ್ಳರು, ಡ್ರಗ್ಸ್ ದಂಧೆಕೋರರನ್ನು ಹಿಡಿಯಬೇಕಾದ ಪೊಲೀಸರು ಕೇಸರಿ ಧ್ವಜ ತೆರವಿನ ಕೆಲಸ ಮಾಡುತ್ತಿರುವುದು ದುರಾದೃಷ್ಟಕರ ಎಂದರು.
ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

Leave a comment
Leave a comment