ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮೂರು ದಶಕಗಳ ಹಿಂದಿನ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರ ಹಿಂದೂ ವಿರೋಧ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಭಾರತದ ಧಾರ್ಮಿಕ ತಳಹದಿಯ ರಾಮಾಯಣದ ಮೂಲಪುರುಷ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿ ರಾಮ ಮೂರ್ತಿ ಪ್ರತಿಷ್ಠಾನ ಮಾಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಳೆಯ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಟೀಕಿಸಿದರು.
ವೋಟ್ ಬ್ಯಾಂಕಿಗಾಗಿ ಅಲ್ಪಸಂಖ್ಯಾತರನ್ನಯ ಓಲೈಕೆ ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರಸೇವಕರನ್ನು ಬಂಧಿಸುವ ಪ್ರಯತ್ನ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ತಿಂಗಳ ೨೨ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಮಾಡುತ್ತಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರು ಹಿಂದೂಗಳನ್ನು ಬಂಧಿಸುವ ಮೂಲಕ ಅವರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದು ಕಾಂಗ್ರೆಸ್ನ ಸರ್ವನಾಶಕ್ಕೆ ನಾಂದಿಯಾಗುತ್ತದೆ ಎಂದರು.
ವಿದ್ರೋಹ ಚಟುವಟಿಕೆ ಮಾಡುವ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಕೇಸ್ಗಳನ್ನು ಹಿಂದೆಪಡೆಯುವ ಕಾಂಗ್ರೆಸ್ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಮುಂದಾದ ಕರಸೇವಕರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಾಯಕರು ತಮ್ಮ ಅವನತಿಗೆ ಕಾರಣವಾಗುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ
Leave a comment
Leave a comment