ತುಮಕೂರು, ಫೆ. 3- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ನಗರದ ಶ್ರೀ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಕ್ತಿ ವಂದನಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ಹಾಗೂ ಬಿಜೆಪಿಯ ಹಿರಿಯ ಮುಖಂಡರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಕಳೆದ ಒಂದು ವಾರದಿಂದ ರಾಯಚೂರ, ಯಾದಗಿರಿ, ಮಂಗಳೂರು, ಚಿಕ್ಕಮಗಳೂರು, ಹಾವೇರಿ, ಹುಬ್ಬಳ್ಳಿ ಪ್ರವಾಸ ಮುಗಿಸಿಕೊಂಡು ತುಮಕೂರಿಗೆ ಆಗಮಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.
ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ
Leave a comment
Leave a comment