ಇಂದು ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ *ಡಾ.ಜಿ.ಪರಮೇಶ್ವರ್ ರವರು
ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ17 ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ವಿವಾಹಗಳು ಮತ್ತು ಜನಜಾಗೃತಿ ಧರ್ಮ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನವ ವಧು ವರರ ದಾಂಪತ್ಯ ಜೀವನಕ್ಕೆ ಶುಭ ಕೋರಿ ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟನೆ ಮಾಡಿ ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನವನ್ನು ತಂದು ಕ್ಷೇತ್ರವನ್ನು ಪ್ರವಾಸಿಗರ ಮತ್ತು ಭಕ್ತಾದಿಗಳ ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಮಾಡುತ್ತೇನೆ.. ಮಾತನಾಡಿದರು
ಈ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ರಂಭಾಪುರಿ ಜಗದ್ಗುರುಗಳು, ಸಿದ್ದರಬೆಟ್ಟ ಶಾಖಾಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿಗಳು, ಸಹಕಾರ ಸಚಿವರಾದ ಕೆ.ಎನ್. ರಾಜಣ್ಣರವರು, ಶಾಸಕರಾದ ಜಿ. ಬಿ. ಜ್ಯೋತಿ ಗಣೇಶ, ಗೌರಿಬಿದನೂರು ಶಾಸಕರಾದ ಪುಟ್ಟಸ್ವಾಮಿ ಗೌಡ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು