ಹದಿಹರೆಯದ ವಯೋಮಾನದವರಲ್ಲಿ ಆತ್ಮಹತ್ಯೆ ಪ್ರಯತ್ನದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನು ಪೋಷಕರು ಮತ್ತು ಶಿಕ್ಷಕ ವರ್ಗ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಮನೋ ವೈದ್ಯ ಡಾ. ಅನಿಲ್ ಕುಮಾರ್ ತಿಳಿಸಿದರು.
ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರ ಹಾಗೂ ಸರ್ಕಾರಿ ಪದವಿ ಪೂರ್ವಕಾಲೇಜು ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಜುನಿಯರ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ಮುಂದಿರುವ ಆದ್ಯತೆಯ ಆಯ್ಕೆಗಳೇನು ಎಂಬುದನ್ನು ಪರಿಗಣಿಸದೆ ಅನ್ಯ ವಿಷಯಗಳಿಗೆ ಹೆಚ್ಚು ಆಸಕ್ತರಾಗುತ್ತಿದ್ದಾರೆ. ಮಾನಸಿಕ ಗೊಂದಲಗಳಿಗೆ ಸಿಲುಕುತ್ತಾರೆ. ಈ ಸಂಕಟಗಳಿAದ ಹೊರಬರಲಾಗದೆ ಆತ್ಮಹತ್ಯೆ ಹಾದಿ ಹಿಡಿಯುವ ಪ್ರಯತ್ನಗಳು ನಡೆಯುತ್ತವೆ. ಈ ಬಗ್ಗೆ ಎಚ್ಚರವಹಿಸಬೇಕಾಗಿದೆ ಎಂದರು.
ವಿದ್ಯಾರ್ಥಿಗಳ ಮೊದಲ ಆದ್ಯತೆ ಶಿಕ್ಷಣದ ಕಲಿಕೆಯಷ್ಟೇ ಆಗಿರಬೇಕು. ಆದರೆ ಸಹವಾಸ ದೋಷ ಇತ್ಯಾದಿಗಳಿಂದಾಗಿ ಬೇರೆ ವಿಷಯಗಳತ್ತ ಮನಸ್ಸು ಕೊಟ್ಟಾಗ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಾರೆ. ಮೊಬೈಲ್ ಬಳಕೆ, ಮಾದಕ ವಸ್ತುಗಳ ಮೋಹ, ಪಾರ್ಕ ಗಳಲ್ಲಿ ಸುತ್ತಾಟ ಇವುಗಳೆಲ್ಲ ವಿದ್ಯಾರ್ಥಿಯ ಭವಿಷ್ಯವನ್ನೇ ಹಾಳು ಮಾಡುತ್ತವೆ. ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ರೂಪಿಸಿಕೊಂಡರೆ ಇವುಗಳಿಂದ ಹೊರಬರಬಹುದು, ಅದಕ್ಕೆ ತಕ್ಕ ಯೋಜನೆ ಮತ್ತು ಸಿದ್ದತೆಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಆತ್ಮಹತ್ಯೆ ಪ್ರಯತ್ನದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ
Leave a comment
Leave a comment