ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ ಬೇಡಿಕೆಗಳ ಪರಿಹಾರ ಸಂಬoದ ಪ್ರಚಾರ ಸಪ್ತಾಹ ಹಾಗೂ ಪ್ರತಿಭಟನೆ ಅಂಗವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿ.ಐ.ಟಿ.ಯು. ತುಮಕೂರು ಜಿಲ್ಲಾ ಸಮಿತಿ ನೇತೃತ್ವದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಎದುರು ಮಳೆಯಲ್ಲೂ ಪ್ರತಿಭಟನಾ ಚಳುವಳಿ ನಡೆಸಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿಯವರ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಯಿತು.