ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿ.ಐ.ಟಿ.ಯು.) ಮಧುಗಿರಿ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಇಂದು ಮಧುಗಿರಿ ವೃತ್ತದ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಬಿ. ಉಮೇಶ್ ಮಾತನಾಡಿ ಕಟ್ಟಡ ಕಾರ್ಮಿಕರಿಗೆ ಸಕಾಲದಲ್ಲಿ ಸೌಲಭ್ಯ ನೀಡದಿರುವು, ಕಡಿತಗೊಳಿಸವುದು, ಅರ್ಜಿಸಲ್ಲಿ ವಂಚಿಸುವುದು, ಅಲೆದಾಡಿಸುವುದು ಹಾಗು ೧೧೦೦ ರೂ. ಸೌಲಭ್ಯ ಪಡೆಯಲು ೨೦೦೦ ರೂ. ಖರ್ಚುಮಾಡುವುದು ಸಹ ಬಷ್ಠ್ರಾಚಾರ ಇನ್ನೊಂದು ಬಾಗವಾಗಿದೆ. ಸಾಮಾಜಿಕ ಬದ್ರತೆಯಡಿ ಕಾರ್ಮಿಕರಿಗೆ ೧೧ ಸೌಲಬ್ಯ ನಿಡುವ ಬದಲು ಕರ್ನಾಟಕ ರಾಜ್ಯ ಸರ್ಕಾರದ ಅಡಿಯಲ್ಲಿರುವ ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯಲ್ಲಿನ ಕಾರ್ಮಿಕರ ನಿಧಿಯನ್ನು ದುರುಪಯೋಗ ಮಾಡುವ ಪ್ರಯತ್ನ ನಡೆದಿರುವುದು ಕಳವಳಕಾರಿ ಸಂಗತಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ಕಾಂಗ್ರೆಸ್ ಪಕ್ಷವು, ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಸರ್ಕಾರದ ಹಾದಿಯಲ್ಲೇ ಸಾಗುತ್ತಿರುವುದು ದುರದೃಷ್ಟಕರ. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ನಿಧಿಯನ್ನು ಮತ್ತೆ ಖರೀದಿಗಳ ನೆಪದಲ್ಲಿ ದುರುಪಯೋಗ ಮಾಡುತ್ತಿರುವುದು ಅತ್ಯಂತ ಖಂಡನಾರ್ಹವಾಗಿದೆ ಆದ್ದರಿಂದ ಮುಖ್ಯಮಂತ್ರಿಗಳು ಇದನ್ನು ತಡೆಯಬೇಂದರು. ತಾಲ್ಲೂಕು ಅದ್ಯಕ್ಷ ಬೆಟ್ಟಪ್ಪ ಮಾತನಾಡಿ ಕಾರ್ಮಿಕ ಸಚಿವರು ಮಂಡಳಿ ಅಧ್ಯಕ್ಷರಾದ ಬಳಿಕ ನೋಂದಾಯಿತ ಕಟ್ಟಡೆ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡುವ ಕಲಿಕಾ ಭಾಗ್ಯ ಯೋಜನೆಯನ್ನು ದುರ್ಬಲಗೊಳಿಸಲಾಗಿದೆ. ಶೇಕಡ ೭೫ರಷ್ಟು ಹಣವನ್ನು ಕಡಿತ ಮಾಡಲಾಗಿದೆ. ಇದರಿಂದಾಗಿ ಸಾವಿರಾರು ಬಡ ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಬ್ಯಾಸದಿಂದ ವಂಚಿತರಾಗುವ ಅಪಾಯ ಬಂದಿದೆ ಎಂದರು.