ಪೌರ ಕಾರ್ಮಿಕರನ್ನು ಸಮಾಜ ಗೌರವಯುತವಾಗಿ ನಡೆಸಿಕೊಳ್ಳಬೇಕು-ಸಚಿವ ಡಾ: ಜಿ. ಪರಮೇಶ್ವರ್
ತುಮಕೂರು(ಕ.ವಾ.)ಜು.೨೮: ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ ಖಾಯಂಗೊಳಿಸಲಾಗುತ್ತಿದ್ದು, ಈ ಪೈಕಿ ಇಂದು ಜಿಲ್ಲೆಯ ೨೦೮ ಕಾರ್ಮಿಕರಿಗೆ ನೇಮಕಾತಿ ಆದೇಶಪತ್ರ ವಿತರಿಸುತ್ತಿರುವುದು ಸಂತಸ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ತಿಳಿಸಿದರು.
ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ, ಮಹಾನಗರಪಾಲಿಕೆಯ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ, ದಾಖಲಾತಿಗಳನ್ನು ಸಲ್ಲಿಸದಿರುವ ೬೮ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ನೀಡುವುದು ಬಾಕಿ ಇದ್ದು, ಸಿಂಧುತ್ವ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಖಾಯಂ ಮಾಡಲಾಗುವುದು ಎಂದರು.
ಸಮಾಜದ ಕೆಳಹಂತದಲ್ಲಿದ್ದುಕೊAಡು ಸಮಾಜಕ್ಕಾಗಿ ದುಡಿಯುವ ಜನರೇ ಪೌರಕಾರ್ಮಿಕರು. ನಗರ ಮತ್ತು ಪಟ್ಟಣ ಸ್ವಚ್ಛತಾ ಕಾರ್ಯದಲ್ಲಿ ಯಾವುದೇ ಕೀಳರಿಮೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ, ನಾವುಗಳು ಈ ಕೆಲಸವನ್ನು ಮಾಡಬೇಕೆ ಅಥವಾ ಮಾಡಬಾರದೆ ಎನ್ನುವಂತಹ ಯಾವುದೇ ಭಾವನೆಗಳಿಲ್ಲದೆ, ನಗರವನ್ನು ಸ್ವಚ್ಛವಾಗಿಡುವುದಕ್ಕೆ ತಮ್ಮನ್ನು ತಾವು ಮುಡಿಪಾಗಿಟ್ಟಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅಭಿನಂದಿಸುವುದಾಗಿ ತಿಳಿಸಿದರು
ಸಮಾಜಕ್ಕಾಗಿ ದುಡಿಯುವ ಜನರೇ ಪೌರಕಾರ್ಮಿಕರು.

Leave a comment
Leave a comment