ಸ್ವಚ್ಛತೆಯೇ ಸೇವೆ ”ವಿಶೇಷ ಆಂದೋಲನ ಃ ಗ್ರಾ.ಪಂ. ಗಳಲ್ಲಿ ೪ಸಾವಿರಕ್ಕೂ ಹೆಚ್ಚು ಸ್ವಚ್ಛತಾ ಚಟುವಟಿಕೆ ಕಾರ್ಯಕ್ರಮ
ಸ್ವಚ್ಛತೆ ಸ್ವಾತಂತ್ರö್ಯಕ್ಕಿAತಲೂ ಶ್ರೇಷ್ಠ ಗ್ರಾಮಗಳು ಶುಚಿತ್ವದಿಂದ ಕೂಡಿದ್ದಲ್ಲಿ ಜನಸಾಮಾನ್ಯರ ಆರೋಗ್ಯ ಬಲವರ್ಧನೆಯಾಗುವುದರೊಂದಿಗೆ ವ್ಯಕ್ತಿ ಮತ್ತು ಸಮಾಜದ ಸಮಗ್ರ ಅಭಿವೃದ್ಧಿಗೂ ಪೂರಕವಾಗುತ್ತದೆ. ಈ ನಿಟ್ಟಿನಲ್ಲಿ ಕಳೆದ ಸೆಪ್ಟೆಂಬರ್ ೧೫ ರಿಂದ ಅಕ್ಟೋಬರ್ ೨ರವರೆಗೆ ಜಿಲ್ಲೆಯ ೩೩೦ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮದಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ೪೦೦೦ಕ್ಕೂ ಹೆಚ್ಚು ವಿವಿಧ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗಿದೆ.
“ಸ್ವಚ್ಛತೆಯೇ ದೈವತ್ವ” ಎಂಬ ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯನ್ನು ಸಾಕಾರಗೊಳಿಸಿ ‘ಸ್ವಚ್ಛ ಭಾರತ’ವನ್ನಾಗಿ ನಿರ್ಮಿಸಬೇಕೆಂಬ ಮಹದಾಶೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿದೆ.