ಜನತಾದರ್ಶನ: ಸ್ವೀಕೃತ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ತುಮಕೂರು(ಕ.ವಾ.)ಸೆ.೨೬: ಜಿಲ್ಲೆಯಲ್ಲಿ ಆಶ್ರಯ ಯೋಜನೆಗೆ ೭೬೧ ಎಕರೆ ಜಾಗವನ್ನು ಗುರುತಿಸಿ ಸರ್ವೇಯನ್ನು ಮಾಡಲಾಗಿದ್ದು, ಈ ಜಾಗವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡು ನರೇಗಾ ಯೋಜನೆಯ ಅನುದಾನವನ್ನು ಬಳಸಿಕೊಂಡು ವಸತಿ ಬಡಾವಣೆ ನಿರ್ಮಾಣ ಮಾಡುವುದಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿAದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಅಕ್ಟೋಬರ್ ೨ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನಿವೇಶನ ರಹಿತರಿಗೆ ನಿವೇಶನಗಳನ್ನು ಕೊಟ್ಟರೆ ಅವರು ಸರ್ಕಾರದ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರದಿAದ ೨ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಿಸಲು ಕಂದಾಯ ನಿರೀಕ್ಷಕರುಗಳು ಜಾಗವನ್ನು ಗುರುತಿಸಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉದ್ಯಾನವನನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಪ್ರತಿನಿತ್ಯ ವಾಯು ವಿಹಾರಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ IPಉಖSನಲ್ಲಿ ಒಟ್ಟು ೮೧೯ ಅರ್ಜಿಗಳು ಸ್ವೀಕೃತಿಯಾಗಿದ್ದು, ಅದರಲ್ಲಿ ಶೇಕಡಾ ೫೦ರಷ್ಟು ಕಂದಾಯ ಇಲಾಖೆಗೆ ಸಂಬAಧಿಸಿದ ಅರ್ಜಿಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಆಯಾ ಇಲಾಖೆಗೆ ಸಂಬAಧಿಸಿದ ಅಧಿಕಾರಿಗಳಿಗೆ ವಿಲೇವಾರಿ ಮಾಡಲಾಗುವುದು. ಎಲ್ಲಾ ತಹಶೀಲ್ದಾರ್ಗಳು ಪ್ರತ್ಯೇಕವಾದ ಕೌಂಟರ್ ತೆರೆದು ಅಲ್ಲಿಗೆ ಒಬ್ಬರನ್ನು ಡೇಟಾಎಂಟ್ರಿ ಆಪರೇಟರ್ ಅನ್ನು ನಿಯೋಜಿಸಿ ಈ ಅರ್ಜಿಗಳ ಪರಿಶೀಲನೆಯನ್ನು ಪ್ರತಿನಿತ್ಯ ಮಾಡುವುದರ ಮೂಲಕ ಮುಂದಿನ ಜನತಾ ದರ್ಶನ ಕಾರ್ಯಕ್ರಮದೊಳಗಾಗಿ ಪರಿಹಾರವನ್ನು ನೀಡಬೇಕೆಂದು ಹೇಳಿದರು.
ಮಳೆ ಹಾನಿಗೊಳಾದ ಮತ್ತು ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವ ಫಲಾನುಭವಿಗಳು ಅವಧಿಯೊಳಗೆ ಮನೆಗಳನ್ನು ನಿರ್ಮಾಣ ಮಾಡುವಂತೆ ಅವರಿಗೆ ತಿಳಿಸಬೇಕೆಂದು ಇಓಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ೨೦೨೩ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯನ್ನು ಪಿಆರ್ಓಗಳು ಬೆಳೆ ಸಮೀಕ್ಷೆ ಅಪ್ನಲ್ಲಿ ಮಾಡುತ್ತಿದ್ದು, ಅವರು ಇನ್ನೂ ೫ ದಿನಗಳೊಳಗಾಗಿ ಶೇಕಡಾ ನೂರರಷ್ಟು ಪ್ರಗತಿಯನ್ನು ಸಾಧಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆಗೆ ಸಂಬAಧಿಸಿದ ಕಡತಗಳನ್ನು ಈ ಆಫೀಸ್ ಮೂಲಕವೇ ವಿಲೇವಾರಿ ಮಾಡಬೇಕು. ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು.
ಜಿಲ್ಲೆಯಲ್ಲಿ ಹೊಸದಾಗಿ ೨೫೬ ಕಂದಾಯ ಗ್ರಾಮಗಳನ್ನಾಗಿ ಮಾಡುವುದಕ್ಕೆ ಆದೇಶ ಹೊರಡಿಸಲಾಗಿದೆ. ಅದರಲ್ಲಿ ೮೦ ಗೊಲ್ಲರಹಟ್ಟಿಗಳಿವೆ ಅವುಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮುಂದಿನ ಸಭೆಗೆ ಬರುವಾಗ ಕ್ರಿಯಾ ಯೋಜನೆ ಸಿದ್ಧಪಡಿಸಿ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಟೋಬರ್ ೧ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಶತಾಯುಷಿಗಳಾಗಿರುವ ೭೦೭ ಜನರಿಗೆ ಸನ್ಮಾನ ಮಾಡಬೇಕೆಂದು ತಹಶೀಲ್ದಾರ್ಗಳಿಗೆ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ಕುಮಾರ್ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.