ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಬಾಗೂರು ಗ್ರಾಮದಲ್ಲಿ ಶ್ರೀರಾಮಾಂಜನೇಯ ಕಲಾ ವೃಂದವತಿಯಿoದ ಸಂಪೂರ್ಣ ರಾಮಾಯಣ ಎಂಬ ಪೌರಾಣಿಕ ನಾಟಕವನ್ನು ದಿ.01 ಮಾರ್ಚ್ ರ ಶುಕ್ರವಾರ ಸಂಜೆ 6 ಗಂಟೆಗೆ ಆಯೋಜಿಸಲಾಗಿದ್ದು ಬಾಗೂರು ಗ್ರಾಮ ಸೇರಿದಂತೆ ಅಕ್ಕ-ಪಕ್ಕದ ಗ್ರಾಮದ ಕಲಾಭಿಮಾನಿಗಳು ಹೆಚ್ಚಿನ ಜನಸಂಖ್ಯೆಯಲ್ಲಿ ನಾಟಕ ಪ್ರದರ್ಶನಕ್ಕೆ ಆಗಮಿಸುವ ಮೂಲಕ ನಾಟಕ ಪ್ರದರ್ಶನವನ್ನು ಯಶಸ್ವಿಗೊಳಿಸಬೇಕಾಗಿ ನಾಟಕ ಮಂಡಳಿಯ ಶಿವಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದಾರೆ.