ತುಮಕೂರು: ಜಿಲ್ಲಾ ಭೋವಿ ಸಂಘ(ರಿ)ದ ವತಿಯಿಂದ ಜುಲೈ ೨೩ ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ವೇದಿಕೆ ಸಭಾಂಗಣದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ೩೮ನೇ ಜನ್ಮ ವರ್ಧಂತಿಯ ಅಂಗವಾಗಿ ಗುರುವಂದನಾ ಮತ್ತು ಸಮುದಾಯದ ನೂತನ ಶಾಸಕರುಗಳಿಗೆ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಭೋವಿ ಗುರುಪೀಠದ ಜಗದ್ಗುರುಗಳಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ವಹಿಸುವರು. ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ನೇರವೇರಿಸುವರು.
ಕಾರ್ಯಕ್ರಮದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಮಾಜಿ ಸಚಿವರಾದ ವೆಂಕಟರಮಣಪ್ಪ, ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್, ಚಂದ್ರಪ್ಪ ಎಂ., ಸುನೀಲ್ ವಲ್ಲಾಪುರೆ, ಮಾನಪ್ಪ ವಜ್ಜಲ್, ರಘು ಎಸ್., ಎ.ಸಿ. ಶ್ರೀನಿವಾಸ್, ಮಂಜುಳ ಅರವಿಂದ ಲಿಂಬಾವಳಿ, ರವಿ ಮಾಕಳಿ ಮತ್ತಿತರರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಶಾಸಕರುಗಳನ್ನು ಅಭಿನಂದಿಸಲಾಗುವುದು. ಜತೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಭೋವಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಗುವುದುಯ
ಈ ಕಾರ್ಯಕ್ರಮದಲ್ಲಿ ಭೋವಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಭೋವಿ ಸಂಘದ ಜಿಲ್ಲಾಧ್ಯಕ್ಷ ಓಂಕಾರ್ ಮನವಿ ಮಾಡಿದ್ದಾರೆ.
ಸಮುದಾಯದ ನೂತನ ಶಾಸಕರುಗಳಿಗೆ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Leave a comment
Leave a comment