ತುಮಕೂರು:ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಶುಕ್ರವಾರ ನಗರದ ರೈಲ್ವೆ ನಿಲ್ದಾಣ, ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು, ಆಟೋ ಚಾಲಕರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಬೆಳಗ್ಗೆ ೮.೩೦ರ ಸುಮಾರಿಗೆ ನಗರದಿಂದ ಬೆಂಗಳೂರಿಗೆ ಹೊರಡುವ ಡೆಮೋ ರೈಲಿನ ವೇಳೆಗೆ ಆಗಮಿಸಿದ ಇಕ್ಬಾಲ್ ಅಹಮದ್ ಪ್ರಯಾಣಿಕರಿಗೆ ಕಾಂಗ್ರೆಸ್ ಪಕ್ಷದ ಕರ ಪತ್ರ ನೀಡಿ,ನಗರದ ಸಮಗ್ರ ಅಭಿವೃದ್ದಿ ಹಾಗೂ ರಾಜ್ಯದ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
