ರೈತರ ಸಂಕಷ್ಟ ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ’
ಗ್ರಾಮ ಪರಿಕ್ರಮ ಯಾತ್ರೆಯಲ್ಲಿ ಶಾಸಕ ಸುರೇಶ್ಗೌಡ ವಾಗ್ದಾಳಿ
ತುಮಕೂರು: ನಾವು ಪೇಪರ್ ಮೇಲಷ್ಟೇ ಶಾಸಕರಾಗಿದ್ದೇವೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಎಲ್ಲೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಎದುರಾಗಿ ತೋಟಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ರೈತರ ಸಂಕಷ್ಟಗಳು ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಬೀಳುತ್ತಿಲ್ಲವೆ? ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ಗೌಡ ಆಕ್ರೊಶ ವ್ಯಕ್ತಪಡಿಸಿದರು.
ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿಯಲ್ಲಿ ಮಂಗಳವಾರ ನಡೆದ ಬಿಜೆಪಿ ರಾಜ್ಯ ರೈತ ಮೋರ್ಚಾದ ಗ್ರಾಮ ಪರಿಕ್ರಮ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಗುತ್ತಿಲ್ಲ, ಟ್ರಾನ್ಸ್ಫಾರ್ಮರ್ ಸುಟ್ಟುಹೋದರೆ ತಿಂಗಳಾದರೂ ಬದಲಾಯಿಸುವುದಿಲ್ಲ. ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಾಗಿದ್ದ ರಾಜ್ಯ ಸರ್ಕಾರ ನಿರ್ಲಕ್ಷತೆವಹಿಸಿದೆ ಎಂದು ಟೀಕಿಸಿದರು.
ರೈತರ ಸಂಕಷ್ಟ ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ
Leave a comment
Leave a comment