ಬೆಂಗಳೂರು ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿರುವ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು

ದಾಖಲಾಗಿದೆಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷ ಜುನೈದ್ ಪಿಕೆ ನೇತೃತ್ವದಲ್ಲಿ ವಕೀಲರ ತಂಡ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ



