ಜನರ ಆಶೀರ್ವಾದ ಬಲದಿಂದ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿ ಕಾಂಗ್ರೆಸ್ ಶಾಸಕಿ ಹಾಗೂ ಎಐಸಿಸಿ ಮಾಧ್ಯಮ ವಕ್ತಾರೆ ಅಲ್ಕಾಲಂಬಾ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹೊಸ ಭರವಸೆಗಳು ಮತ್ತು ಬಿಜೆಪಿ ಪಕ್ಷದ ಶೂನ್ಯ ಸಾಧನೆ ಪ್ರಸಕ್ತ ಚುನಾವಣೆಯಲ್ಲಿ ಚರ್ಚೆಗೆ ಗ್ರಾಸವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಜನಮತ ವ್ಯಕ್ತವಾಗಲಿದೆ ಎಂದರು.
ಶೇ.೪೦ ರಷ್ಟು ಕಮೀಷನ್ ಪಡೆಯುವಲ್ಲಿ ಮಗ್ನವಾದ ರಾಜ್ಯ ಬಿಜೆಪಿ ಸರ್ಕಾರ ಅಭಿವೃದ್ಧಿಯತ್ತ ಗಮನಹರಿಸದೆ ಕೋಮು ದ್ವೇಶ ಬಿತ್ತಿ ಸಮಾಜದ ಶಾಂತಿ, ಸೌಹಾರ್ಧತೆ, ಸ್ವಾಸ್ತö್ಯವನ್ನು ಕೆಡಿಸುವ ಹುನ್ನಾರ ನಡೆಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಅವಕಾಶ ನೀಡುವುದಿಲ್ಲ ಎಂದರು.
ಕೇAದ್ರ ಸರ್ಕಾರದಲ್ಲಿ ಗೃಹಮಂತ್ರಿಯಾಗಿರುವ ಅಮಿತ್ ಶಾ ಚುನಾವಣಾ ಪ್ರಚಾರದ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆ, ಗಲಾಟೆಗಳನ್ನು ಮಾಡಿಸುತ್ತದೆ ಎಂಬ ಅರ್ಥ ಬರುವ ಮಾತುಗಳನ್ನಾಡಿದ್ದು, ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಐಸಿಸಿ ಮಾಧ್ಯಮ ವಕ್ತಾರೆ ಅಲ್ಕಾಲಂಬಾ
Leave a comment
Leave a comment