ದುರ್ವಾಸನೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ವಾರ್ಡ್ ೩೦ರ ಜಯನಗರ ಪೂರ್ವ ಮತ್ತು ಪಶ್ಚಿಮ ಬಡಾವಣೆಗಳ ಸ್ವಚ್ಚತೆಗೆ ಪೌರಕಾರ್ಮಿಕರ ಕೊರತೆಯಿದ್ದು, ಆಯುಕ್ತರು ಈ ಭಾಗಕ್ಕೆ ಹೆಚ್ಚಿನ ಪೌರಕಾರ್ಮಿಕರನ್ನು ನೇಮಿಸಿ ಸ್ವಚ್ಚತೆ ನೀಡಬೇಕು ಜೊತೆಗೆ ಈ ಭಾಗದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಯನಗರ ಪಶ್ಚಿಮ ಬಡಾವಣೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಪೊಲೀಸ್ ಠಾಣೆಯನ್ನು ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದ ಅವರು, ಖಾಲಿ ನಿವೇಶನಗಳನ್ನು ಸ್ವಚ್ಚವಾಗಿಟ್ಟುಕೊಳ್ಳದ ಮಾಲೀಕರಿಗೆ ದಂಡ ವಿಧಿಸಿ ಪಾಲಿಕೆಯಿಂದಲೇ ಸ್ವಚ್ಚಗೊಳಿಸುವಂತೆ ಆಗ್ರಹಿಸಿದರು.
ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಆದೇಶದ ಮೇರೆಗೆ ಎಲ್ಲಾ ವಾರ್ಡುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಮುಂದಾಗಿರುವುದಾಗಿ ತಿಳಿಸಿದ ಅವರು, ನವೆಂಬರ್ ೧೫ ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಐದಾರು ವಾರ್ಡುಗಳನ್ನು ಸೇರಿಸಿ ಜನಸ್ಪಂಧನಾ ಕಾರ್ಯಕ್ರಮ ಹಮ್ಮಿಕೊಂಡು ಆಯಾ ವಾರ್ಡಿನ ಸಮಸ್ಯೆಗಳ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಮುರಳೀಧರ ಹಾಲಪ್ಪ ತಿಳಿಸಿದರು.
ನಾಗರೀಕರ ಸಮಸ್ಯೆಗಳಿಗೆ ಸ್ಪಂದಿಸಿದ ಆಯುಕ್ತೆ ಬಿ.ವಿ. ಅಶ್ವಿಜ ಅವರು, ಈ ಭಾಗದ ನಾಗರೀಕರು ಹಲವಾರು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಜೊತೆಗೆ ನಾನು ಇಂದು ಖುದ್ದು ಭೇಟಿ ಮಾಡಿ ವೀಕ್ಷಣೆ ಮಾಡಿದ್ದು, ೨.೫ಕಿ.ಮೀ. ರಸ್ತೆಯಲ್ಲಿ ಜೆಲ್ಲಿ ಹಾಕಿ ತಿಂಗಳುಗಳೇ ಕಳೆದಿವೆ ಎಂದು ದೂರುಗಳು ಬಂದಿದ್ದು, ಪಿಡಬ್ಲೂö್ಯಡಿ ಇಂಜಿನಿಯರುಗಳ ಬಳಿ ಮಾತನಾಡಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆ ರಸ್ತೆಯನ್ನು ದುರಸ್ಥಿಗೊಳಿಸುತ್ತೇವೆಂದು ಹೇಳಿದ್ದಾರೆ ಎಂದರು.
ಮಳೆ ಬಂದರೆ ದೇವಸ್ಥಾನಕ್ಕೆ ನೀರು ನುಗ್ಗುತ್ತದೆ ಅದಕ್ಕೆ ಶೀಟ್ ಹಾಕಿಕೊಡುವಂತೆ ಇಲ್ಲಿನ ನಾಗರೀಕರು ಮನವಿ ಮಾಡಿದ್ದಾರೆ. ಆ ಬಗ್ಗೆ ಕ್ರಮ ವಹಿಸಲಾಗುವುದು. ಹಾಗೆಯೇ ೧ನೇ ಮುಖ್ಯರಸ್ತೆಯಲ್ಲಿರುವ ರಾಜಗಾಲುವೆಯ ಪಕ್ಕದಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ಅದನ್ನು ದುರಸ್ಥಿ ಮಾಡಲಾಗುವುದು ಅದರ ಮೇಲೆ ಸ್ಲಾö್ಯಬ್ಗಳನ್ನು ಹಾಕಲು ಪಾಲಿಕೆಯಲ್ಲಿ ನಿಬಂಧನೆಗಳನ್ನು ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆ ೨ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ನ್ನು ನಾಗರೀಕ ಸಮಿತಿಯವರು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದ್ದಾರೆ. ಪಾರ್ಕ್ನಲ್ಲಿ ವಿದ್ಯುತ್ ದೀಪ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸೊಳ್ಳೆಗಳ ನಿಯಂತ್ರಣಕ್ಕೆ ಈಗಾಗಲೇ ವಿವಿಧ ವಾರ್ಡುಗಳಲ್ಲಿ ಫಾಗಿಂಗ್ ಮಾಡಲಾಗುತ್ತಿದ್ದು, ಈ ವಾರ್ಡಿನಲ್ಲಿ ಇಂದಿನಿAದಲೇ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಡುಗೆ ಮನೆಯಿಂದ ಉತ್ಪತ್ತಿಯಾಗುವ ವ್ಯರ್ಥ ನೀರನ್ನು ಚರಂಡಿಗಳಿಗೆ ನೇರವಾಗಿ ಬಿಡುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ. ಆದ್ದರಿಂದ ವಾರ್ಡ್ ನಂ.೧೨ ರಲ್ಲಿ ನಾಗರೀಕರಿಗೆ ಈ ಬಗ್ಗೆ ಅರಿವು ಮೂಡಿಸಲು ಮೆಗಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಪಾಲಿಕೆಯಲ್ಲಿ ಪೌರಕಾರ್ಮಿಕ ಕೊರತೆಯಿದ್ದು, ೮೭ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಸರ್ಕಾರದಿಂದ ಆದೇಶ ಬಂದಿದ್ದು, ಅದರ ಪ್ರಕಾರ ನಾವು ನೇಮಕಾತಿ ಮಾಡಿಕೊಳ್ಳಲಾಗುವುದು. ಇನ್ನೇ ಹೆಚ್ಚುವರಿ ಅವಶ್ಯಕತೆ ಇದ್ದರೆ ಸರ್ಕಾರಕ್ಕೆ ಮತ್ತೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾಯಿಮಂದಿರ ಅಧ್ಯಕ್ಷ ಮಹದೇವಪ್ಪ, ಜಯನಗರ ನಾಗರೀಕರ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ವೀರಪ್ಪದೇವರು, ಉಪಾಧ್ಯಕ್ಷರಾದ ಬಸವರಾಜಯ್ಯ, ದ್ವಾರಕನಾಥ್, ಉದ್ಯಾನವನ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ, ನಾಗರೀಕರ ಸಮಿತಿಯ ಮಾರ್ಗದರ್ಶಕ ನಾಗರಾಜ್ ರಾವ್, ಸಂಘಟನಾ ಕಾರ್ಯದರ್ಶಿಗಳಾದ ವೆಂಕಟೇಶ್, ಪುಟ್ಟರುದ್ರಯ್ಯ, ಗೋಪಾಲಕೃಷ್ಣ, ಪಾಲಿಕೆ ಸದಸ್ಯ ಸಿ.ಎನ್.ರಮೇಶ್, ಸ್ಥಳೀಯರಾದ ವಸುಂಧರ, ಅಂಬಾ, ಮಂಜುಳ, ಚಿಕ್ಕತಾಯಮ್ಮ, ಜಯನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹಾಲಕ್ಷಿ÷್ಮÃ ಮುಂತಾದವರಿದ್ದರು.