ತುಮಕೂರು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ತುಮಕೂರು ವತಿಯಿಂದ ಪ್ರಸ್ತುತ ಸಾಲಿನ ಕ್ರಿಯಾ ಯೋಜನೆ ಪುಸ್ತಕವನ್ನು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ರಾಜ್ಯ ಸಂಸ್ಥೆಯಿAದ ಮುದ್ರಿತವಾದ ಈ ಪುಸ್ತಕವು ರಾಜ್ಯಮಟ್ಟ, ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ ಹಾಗೂ ದಳಮಟ್ಟದವರೆಗೆ ಪ್ರತಿ ತಿಂಗಳ ಕಾರ್ಯಕ್ರಮವನ್ನು ರೂಪಿಸುವ ಕುರಿತು ತಯಾರಾಗಿದ್ದು, ಇದರಿಂದಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ. ಪ್ರಭು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಧರ್, ಜಿಲ್ಲಾ ದೈಹಿಕ ಶಿಕ್ಷಣ ಪರೀಕ್ಷಕರಾದ ಪರಮೇಶ್ವರ್, ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಮುಖ್ಯ ಆಯುಕ್ತರಾದ ಆಶಾ ಪ್ರಸನ್ನಕುಮಾರ್, ಜಿಲ್ಲಾ ಆಯುಕ್ತರಾದ ವೇಣುಗೋಪಾಲಕೃಷ್ಣ, ಸುಭಾಷಿಣಿ ಆರ್ ಕುಮಾರ್, ಜಿಲ್ಲಾ ಜಂಟಿ ಕಾರ್ಯದರ್ಶಿ ಅಂಜನಪ್ಪ, ಜಿಲ್ಲಾ ಸಹಾಯಕ ಆಯುಕ್ತ ಹುಚ್ಚಯ್ಯ, ಜಿಲ್ಲಾ ಸಂಘಟಕರಾದ ನವೀನ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತುಮಕೂರು ವತಿಯಿಂದ ಪ್ರಸ್ತುತ ಸಾಲಿನ ಕ್ರಿಯಾ ಯೋಜನೆ
1 Comment
1 Comment
-
Pingback: ಹೌಸ್ ಟು ಹೌಸ್ ಸರ್ವೇ ಪೂರ್ಣಗೊಳಿಸಿ - Target Truth